ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾದ ಕಾರಿಗೆ ಬೆಂಕಿ ಹತ್ತಿಕೊಂಡು ಉರಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಕಾರಿನಲ್ಲಿದ್ದ ಯುವಕ, ಯುವತಿ ಸಣ್ಣಪುಟ್ಟ ಗಾಯಗಗೊಂಡಿದ್ದಾರೆ.

ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಾಗಿ ಹೊಸ ಹೆದ್ದಾರಿಯ ಚರಂಡಿಗೆ ಅಳವಡಿಸಿದ್ದ ಮೋರಿಗೆ ಕಾರು ಡಿಕ್ಕಿಯಾಗಿ ಎಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿತ್ತು.

ಪುತ್ತೂರುನಿಂದ ಅಗ್ನಿಶಾಮಕ ವಾಹನ ಬಂದು ಬೆಂಕಿ ನಂದಿಸಿತು. ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಉರಿದು ಹೋಗಿತ್ತು. ಕಾರಿನಲ್ಲಿದ್ದವರ ವಿವರ ತಿಳಿದುಬಂದಿಲ್ಲ, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.