ಗುರುವಾರ , ಜೂನ್ 24, 2021
27 °C

ಕಾರು-ಟ್ಯಾಂಕರ್ ಡಿಕ್ಕಿ: ಆರು ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವಿನ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್ ಪಾಣೆಮಂಗಳೂರು ಬಳಿ ಮಂಗಳವಾರ ಈ ಅಪಘಾತ ನಡೆದಿದೆ. 

ಮೂಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿದ ಬಳಿಕ ಬೆಳಿಗ್ಗೆ ಹಿಂತಿರುಗುತ್ತಿದ್ದರು.

ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ಎದುರಿನಿಂದ ಬಂದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಘುನಾಥ, ಶೇಖರ ಐಕಳ, ಮುದರ, ರಾಜೇಶ್, ಸಂದೀಪ್ ಗೋಪಾಲ ಅವರಿಗೆ ಗಂಭೀರ ಗಾಯವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು