ಉಜಿರೆ: ಮುಜರಾಯಿ ಇಲಾಖೆಗೆ ಸೇರಿದ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಕಾಣಿಕೆ ಹುಂಡಿಯ ಎಣಿಕೆ ವೇಳೆ ವಂಚಿಸಿದ ಆರೋಪದ ಮೇಲೆ ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ಗಣೇಶ್ ನಾಯ್ಕ ವಿರುದ್ಧ ಪ್ರಕರಣ ದಾಖಲಾಗಿದೆ.

ಬ್ಯಾಂಕ್ ಸಿಬ್ಬಂದಿಯೊಬ್ಬರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ನೇತೃತ್ವದಲ್ಲಿ ಕಾರ್ಯ ನಿರ್ವಹಣಾಧಿಕಾರಿ, ಕೊಕ್ಕಡ ಕೆನರಾ ಬ್ಯಾಂಕ್ ಸಿಬ್ಬಂದಿ ಮ್ಯಾಥ್ಯೂ, ಗಣೇಶ ನಾಯ್ಕ ಹಾಗೂ ಜಿಲ್ಲಾಧಿಕಾರಿ ಕಚೇರಿಯಿಂದ ನಿಯೋಜಿತರಾದ ಸಿಬ್ಬಂದಿ ಹಾಗೂ ದೇವಸ್ಥಾನದ ವತಿಯಿಂದ ಕರೆಸಿದ 42 ಸ್ವಯಂಸೇವಕರು ಮತ್ತು ದೇವಳದ 20 ಸಿಬ್ಬಂದಿ ಸೇರಿ ಜೂನ್ 20ರಂದು ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಗಿತ್ತು.

ಎಣಿಕೆ ವೇಳೆ ₹ 500, ₹200, ₹100, ₹50, ₹20 ಮತ್ತು ₹10ರ ನೋಟುಗಳನ್ನು ವಿಂಗಡಣೆ ಮಾಡಿ, ಜೋಡಿಸಿ ಇಡಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿ ಗಣೇಶ ನಾಯ್ಕ ಕೆಲ ನೋಟುಗಳನ್ನು ಬಂಡಲ್ಗೆ ಹೆಚ್ಚು ಸೇರಿಸಿದ ಬಗ್ಗೆ ಸಂಶಯ ಬಂದ ಹಿನ್ನೆಲೆಯಲ್ಲಿ ಹಣದ ಒಂದು ಬಂಡಲ್ ತೆಗೆದು ಎಣಿಸಿದಾಗ ಅದರಲ್ಲಿ ಹೆಚ್ಚುವರಿ ನೋಟುಗಳು ಕಂಡು ಬಂದಿದ್ದವು. ಬಳಿಕ ಎಲ್ಲಾ ಬಂಡಲ್ಗಳನ್ನು ಮರು ಎಣಿಕೆ ಮಾಡಿದಾಗ ಒಟ್ಟು ₹40 ಸಾವಿರ ಹೆಚ್ಚುವರಿ ಹಣ ಪತ್ತೆಯಾಗಿತ್ತು. ಈ ಕುರಿತು ಜೂನ್ 26ರಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.