ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೇರು ಬೆಳೆಗೆ ಉತ್ತೇಜನ: ಮಮತಾ ಗಟ್ಟಿ

Published 20 ಜೂನ್ 2024, 14:20 IST
Last Updated 20 ಜೂನ್ 2024, 14:20 IST
ಅಕ್ಷರ ಗಾತ್ರ

ಉಳ್ಳಾಲ: ‘ಗೇರು ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಗಾರಗಳ ಆಯೋಜನೆ ಮತ್ತು ಮನೆಗೊಂದು ಗೇರುಗಿಡ ಯೋಜನೆಯನ್ನು ನಿಗಮದಿಂದ ಕೈಗೊಳ್ಳಲಾಗುವುದು’ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಹೇಳಿದರು.

ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಕೆಲವು ಕೃಷಿಕರು ಖಾಲಿ ಜಾಗದಲ್ಲಿ ಗೇರು ಕೃಷಿ ಮಾಡಲು ಮುಂದೆ ಬಂದಿದ್ದಾರೆ. 18 ವಿವಿಧ ತಳಿಯ ಗೇರುಗಳಿವೆ. ಉಳ್ಳಾಲದ ಗೇರು ಅಭಿವೃದ್ಧಿ ಸಂಶೋಧನಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧೆಡೆ ನರ್ಸರಿಗಳಿದ್ದು ಗೇರುಗಿಡಗಳ ಲಭ್ಯವಿದೆ’ ಎಂದರು.

ಗೇರು ಹಣ್ಣಿನಿಂದ ಜ್ಯೂಸ್ ತಯಾರಿಸುವ ಉದ್ಯಮಕ್ಕೆ ಆದ್ಯತೆ ನೀಡಲಾಗುವುದು. ನಿಗಮವು ಕಳೆದ ಬಾರಿ ₹4.5 ಕೋಟಿ ಲಾಭ ಗಳಿಸಿತ್ತು. ತಮ್ಮ ಅಧಿಕಾರ ಅವಧಿಯಲ್ಲಿ ನಿಗಮವು ಇನ್ನಷ್ಟು ಲಾಭ ಗಳಿಸುವಂತೆ ಮಾಡಲಾಗುವುದು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕ ಕೆ.ಟಿ.ಸುವರ್ಣ ಮಾತನಾಡಿದರು. ತಾ.ಪಂ ಮಾಜಿ ಸದಸ್ಯೆ ಸುರೇಖಾ ಚಂದ್ರಹಾಸ್, ಕಾಂಗ್ರೆಸ್ ಮಹಿಳಾ ಮಂಡಲ ಅಧ್ಯಕ್ಷೆ ಚಂದ್ರಿಕಾ ರೈ ಕೋಟೆಕಾರು, ಪತ್ರಕರ್ತರ ಸಂಘದ ಉಪಾಧ್ಯಕ್ಷ ಅನ್ಸಾರ್ ಇನೋಳಿ, ಉಳ್ಳಾಲ ತಾಲ್ಲೂಕು ಘಟಕದ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರೀಫ್ ಕಲ್ಕಟ್ಟ, ಕೋಶಾಧಿಕಾರಿ ಬಶೀರ್ ಕಲ್ಕಟ್ಟ, ಉಳ್ಳಾಲ ತಾಲ್ಲೂಕು ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಆಸೀಫ್ ಬಬ್ಬುಕಟ್ಟೆ, ಶಿವಶಂಕರ್ , ರಜನಿಕಾಂತ್, ಸತೀಶ್ ಕುಮಾರ್ ಪುಂಡಿಕಾಯಿ, ಅಶ್ವಿನ್ ಕುತ್ತಾರ್, ಗಂಗಾಧರ್, ಸುಶ್ಮಿತಾ ಇದ್ದರು.

ಉಪಾಧ್ಯಕ್ಷ ದಿನೇಶ್ ನಾಯಕ್ ಸ್ವಾಗತಿಸಿದರು. ಪ್ರ.ಕಾ ಶಶಿಧರ್ ಪೊಯ್ಯತ್ತಬೈಲ್ ನಿರೂಪಿಸಿದರು. ಸತೀಶ್ ಕೊಣಾಜೆ, ವಜ್ರ ಗುಜರನ್ ಅತಿಥಿಗಳನ್ನು ಪರಿಚಯಿಸಿದರು. ಮೋಹನ್ ಕುತ್ತಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT