ಮಂಗಳೂರು: ಅನಧಿಕೃತವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನವನ್ನು ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆಸಿದ ವೇಳೆ ಪೊಲೀಸರು ಹಾರಿಸಿದ ಗುಂಡು ಆರೋಪಿ ಕಾಲಿಗೆ ತಗುಲಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಲದಲ್ಲಿ ಬುಧವಾರ ಬೆಳಗಿನಜಾವ ನಡೆದಿದೆ.

'ಕೇರಳ ಕಾಸರಗೋಡಿನ ಆರೋಪಿ ಅಬ್ದುಲ್ಲಾ (40), ಐಚರ್ ವಾಹನದಲ್ಲಿ 10 ಜಾನುವಾರು ಸಾಗಿಸುತ್ತಿದ್ದು, ಆತನೇ ಚಾಲಕನಾಗಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ವಾಹನ ನಿಲ್ಲಿಸದೆ ಮುಂದೆ ಹೋಗಿದ್ದು, ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದರು. ಈ ವೇಳೆಗೆ ಆರೋಪಿಯು ತಾನು ಚಲಾಯಿಸುತ್ತಿದ್ದ ವಾಹನವನ್ನು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿ, ಕೊಲೆಗೆ ಯತ್ನಿಸಿದ್ದಾನೆ. ಆಗ ಪಿಎಸ್ಐ ಎರಡು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಾಹನದಲ್ಲಿದ್ದ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲಾನನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.