ಉಳ್ಳಾಲ: ಹಲವು ಪ್ರಕರಣಗಳಲ್ಲಿಆರೋಪಿಯಾಗಿದ್ದು ತಲೆಮರೆಸಿಕೊಂಡಿದ್ದ ಕಸಬಾ ಬೆಂಗ್ರೆ ನಿವಾಸಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಕೊಣಾಜೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಆರೋಪಿ ಬಳಿಯಿಂದ 12 ಗ್ರಾಂ ತೂಕದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ವಿರುದ್ಧ ಉಳ್ಳಾಲ, ಕೊಣಾಜೆ, ಕಂಕನಾಡಿ, ಬಜಪೆ, ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪಶ್ಚಿಮ, ಉಪ್ಪಿನಂಗಡಿ, ಪೊಲೀಸ್ ಠಾಣೆಗಳಲ್ಲಿ ಸೇರಿ ಜಾನುವಾರು ಕಳವಿಗೆ ಸಂಬಂಧಿಸಿ 14 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವಸ್ಥಾನವೊಂದರ ಹಸು ಕದ್ದ ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಮತ್ತು ಉತ್ತರ ಠಾಣೆಗಳಲ್ಲಿ ಪ್ರಕರಣವಿದೆ. 2019ರ ಜೂನ್ 30 ರಂದು ಕಸಬಾ ಬೆಂಗ್ರೆಯಲ್ಲಿ ದ ಆರೋಪಿಯನ್ನು ಬಂಧಿಸಲಾಗಿತ್ತು. 2022ರ ಆ.22 ರಂದು ಸಿಸಿಬಿ ಪೊಲೀಸರು ಮತ್ತೊಂದು ಪ್ರಕರಣ ಸಂಬಂಧ ಆತನನ್ನು ಬಂಧಿಸಿದ್ದರು. ಆ ವೇಳೆ ಸಿಸಿಬಿ ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕರಣ ಸಂಬಂಧ ಆತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿ ಕಬೀರ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.