ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ: ಚಂಪಾಷಷ್ಠಿಯಂದು 194 ಭಕ್ತರಿಂದ ಎಡೆಸ್ನಾನ

Published 18 ಡಿಸೆಂಬರ್ 2023, 23:30 IST
Last Updated 18 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಚಂಪಾಷಷ್ಠಿಯ ದಿನವಾದ ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 194 ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು.

ಬಾಲೆ ಎಲೆಯಲ್ಲಿ ಬಡಿಸಿದ್ದ ದೇವರ ನೈವೇದ್ಯವನ್ನು ಗೋವುಗಳಿಗೆ ತಿನ್ನಿಸಿದ ಬಳಿಕ ಆ ಎಲೆಗಳ ಮೇಲೆ ಭಕ್ತರು ಉರುಳು ಸೇವೆ ನಡೆಸಿ ಹರಕೆ ಸಲ್ಲಿಸಿದರು.

118 ಪುರುಷರು ಮತ್ತು 76 ಮಹಿಳೆಯರು ಈ ಸೇವೆ ನೆರವೇರಿಸಿದರು. ಚಂಪಾಷಷ್ಠಿ ಜಾತ್ರೋತ್ಸವದ ಚೌತಿ, ಪಂಚಮಿ ಮತ್ತು ಷಷ್ಠಿಯ ದಿನ ಭಕ್ತರು ಸ್ವಯಂಪ್ರೇರಿತರಾಗಿ ಎಡೆಸ್ನಾನ ಸೇವೆ ಸಲ್ಲಿಸಿದ್ದರು.

ಧಾರ್ಮಿಕ ದತ್ತಿ ಇಲಾಖೆಯ ಆಗಮ ಪಂಡಿತ ರಾಜಗೋಪಾಲ್ ಅವರು ಎಡೆಸ್ನಾನದ ಕುರಿತು ಮಾರ್ಗದರ್ಶನ ನೀಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತಲೂ 432 ಬಾಳೆಎಲೆ ಹಾಕಿ ಅದರ ಮೇಲೆ ದೇವರ ನೈವೇದ್ಯ ಬಡಿಸಲಾಯಿತು. ಗೋವು ತಿಂದ ಎಲೆಯ ಮೇಲೆ ಉರುಳು ಸೇವೆ ಮಾಡುತ್ತಾ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ಭಕ್ತರು ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ದೇವರ ಪ್ರಸಾದ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT