ಧರ್ಮ ಸಂಸದ್ ಉದ್ಘಾಟನೆಗೆ ಮುಖ್ಯಮಂತ್ರಿ ಆಗಮನ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

7

ಧರ್ಮ ಸಂಸದ್ ಉದ್ಘಾಟನೆಗೆ ಮುಖ್ಯಮಂತ್ರಿ ಆಗಮನ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Published:
Updated:
Deccan Herald

ಉಜಿರೆ:  ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ರಾಮಕ್ಷೇತ್ರದಲ್ಲಿ ಸೆಪ್ಟೆಂಬರ್‌ 3 ರಂದು ಆಯೋಜಿಸಿರುವ ರಾಷ್ಟ್ರೀಯ ಧರ್ಮಸಂಸದ್ ಅನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಘಾಟಿಸುವರು ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸುವರು. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಅಂಕಿ-ಅಂಶ ಹಾಗೂ ಯೋಜನಾ ಅನುಷ್ಠಾನ ಖಾತೆ ಸಚಿವ ಡಿ.ವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್, ಸಂಸದರಾದ ನಳಿನ್‌ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆ ಹಾಗೂ ನವದೆಹಲಿಯ ಡಾ. ಎಸ್.ಸಿ ಶರ್ಮ ಮುಖ್ಯ ಅತಿಥಿಗಳಾಗಿರುವರು.

ನಾಳೆ ಹೊರೆ ಕಾಣಿಕೆ: ಇದೇ 30ರಂದು ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ 81 ಗ್ರಾಮಗಳಿಂದ ರಾಮಕ್ಷೇತ್ರಕ್ಕೆ ಹೊರೆಕಾಣಿಕೆಯನ್ನು ಮೆರವಣಿಗೆಯಲ್ಲಿ ಸಮರ್ಪಿಸಲಾಗುವುದು. ಧರ್ಮ ಸಂಸದ್‌ನಲ್ಲಿ 2,000ಕ್ಕೂ ಮಿಕ್ಕಿ ಸಾಧು - ಸಂತರು ಹಾಗೂ 25,000 ಪ್ರತಿನಿಧಿಗಳು ಭಾಗವಹಿಸಲಿದ್ದು, ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 

ಸೆಪ್ಟೆಂಬರ್‌ 2 ರಂದು ಭಾನುವಾರ ಉಜಿರೆಯಿಂದ ರಾಮಕ್ಷೇತ್ರಕ್ಕೆ ಸಾಧು-ಸಂತರ ಶೋಭಾಯಾತ್ರೆ ನಡೆಯಲಿದೆ.  ಜಿಲ್ಲಾಧಿಕಾರಿಯವರಿಂದ ‌

ಸಮಾಲೋಚನಾ ಸಭೆ : ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸೆ. 3 ರಂದು ರಾಮಕ್ಷೇತ್ರಕ್ಕೆ ಆಗಮಿಸುವ ಕಾರ್ಯಕ್ರಮ ಖಚಿತಗೊಂಡಿದ್ದು , ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಬುಧವಾರ ರಾಮಕ್ಷೇತ್ರದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮಾಲೋಚನಾ ಸಭೆ ನಡೆಸಿ ಪೂರ್ವ ಸಿದ್ದತೆಗಳ ಬಗ್ಗೆ ಹಾಗೂ ಶಿಷ್ಟಾಚಾರ ಪಾಲಿಸುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು.

ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.  ಡಿವೈಎಸ್‌ಪಿ ಹೃಷಿಕೇಶ್, ಬೆಳ್ತಂಗಡಿ ತಹಶಿಲ್ದಾರ್ ಮದನ್ಮೋಹನ್ ಮತ್ತು ಶಾಸಕ ಹರೀಶ್ ಪೂಂಜ  ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !