ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾಂಜಲಿ ಟ್ರಸ್ಟ್ ಆರೋಗ್ಯ ಕಾರ್ಡ್ ಬಿಡುಗಡೆ ಮಾಡಿದ ಯಡಿಯೂರಪ್ಪ

Last Updated 5 ನವೆಂಬರ್ 2020, 8:24 IST
ಅಕ್ಷರ ಗಾತ್ರ

ಮಂಗಳೂರು: ಸೇವಾಂಜಲಿ ಚಾರಿಟಬಲ್ ಟ್ರಸ್ಟ್‌ನ ನೂತನ ಸೇವಾಂಜಲಿ ಆರೋಗ್ಯ ಕಾರ್ಡ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗುರುವಾರ ನಗರದ ಒಷಿಯನ್ ಪರ್ಲ್ ಹೋಟಲ್‌ನಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅವರಿಗೆ ಸೇವಾಂಜಲಿ ಚಾರಿಟಬಲ್ ಟ್ರಸ್ಟ್ ಮಾಡುತ್ತಿರುವ ಜನಪರ ಸೇವಾಕಾರ್ಯಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ, ಟ್ರಸ್ಟ್ ಅಧ್ಯಕ್ಷ ವೇದವ್ಯಾಸ ಕಾಮತ್ ವಿವರಿಸಿದರು.

ಸೇವಾಂಜಲಿ ಟ್ರಸ್ಟ್ ಕಾರ್ಯಗಳು ಹೀಗೆ ನಿರಂತರವಾಗಿ ನಡೆದು ಸಮಾಜದ ದುರ್ಬಲ, ಅಶಕ್ತರಿಗೆ ಸಹಾಯವಾಗಲಿ, ಈ ಟ್ರಸ್ಟ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪ್ರಮುಖರಿಗೆ, ಕಾರ್ಯಕರ್ತರಿಗೆ ಶುಭವಾಗಲಿ ಎಂದು ಸಿಎಂ ಯಡಿಯೂರಪ್ಪ ಆರೋಗ್ಯ ಕಾರ್ಡ್ ಹಾರೈಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮೇಯರ್ ದಿವಾಕರ ಪಾಂಡೇಶ್ವರ್, ರಾಜ್ಯ ಕೈಗಾರಿಕಾ ಪ್ರಕೋಷ್ಟದ ಸಂಚಾಲಕ ಪ್ರದೀಪ್ ಪೈ, ಶಾಸಕರಾದ ಉಮಾನಾಥ ಕೋಟ್ಯಾನ್, ಟ್ರಸ್ಟ್ ಪ್ರಮುಖರಾದ ಚೇತನ್ ಕಾಮತ್ ಸಹಿತ ಅನೇಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT