ಬೆಳ್ತಂಗಡಿ: ಪೊಲೀಸರು ಸಮಾಜದ ರಕ್ಷಣೆಗಾಗಿರುವರು. ಮಕ್ಕಳು ಪೊಲೀಸರನ್ನು ಕಂಡು ಭಯ ಪಡುವ ಅವ್ಯಶ್ಯಕತೆ ಇಲ್ಲ. ಸ್ನೇಹಪರ ವಾತಾವರಣ ಹಾಗೂ ವಿಧಾನವನ್ನು ಸಂಯೋಜಿಸುವ ಉದ್ದೇಶದಿಂದ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮಕ್ಕಳ ಸ್ನೇಹಿ ಘಟಕ ಸ್ಥಾಪಿಸಲಾಗುತ್ತಿದೆ ಎಂದು ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಸುಬ್ರಪುರ್ ಮಠ ಹೇಳಿದರು.

ಬುಧವಾರ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ವಿಶೇಷ ಕೊಠಡಿ ಸದ್ಯದಲ್ಲಿ ತೆರೆಯಲಿದ್ದು, ಮಕ್ಕಳ ಸ್ನೇಹಿ ಅಧಿಕಾರಿಗಳು ಆ ಕೊಠಡಿಯಲ್ಲಿರುತ್ತಾರೆ. ಆದ್ದರಿಂದ ತಮಗೆ ಇರುವ ಸಮಸ್ಯೆಗಳ ಬಗ್ಗೆ ಅವರಲ್ಲಿ ವಿವರಿಸಬಹುದು ಎಂದು ಹೇಳಿದರು.

ಬೆಳ್ತಂಗಡಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರವಿ ಬಿ.ಎಸ್. ಮಾತನಾಡಿ, 'ಮಕ್ಕಳ ಹಕ್ಕುಗಳು, ಶಿಕ್ಷಣದ ಮಹತ್ವ, ಬಾಲ್ಯವಿವಾಹ, ಲೈಂಗಿಕ ಅಪರಾಧ ಸೇರಿದಂತೆ ಮಕ್ಕಳ ವಿರುದ್ಧದ ಅಪರಾಧಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.