ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ಕ್ರೈಸ್ತ ಧರ್ಮಗುರು ಸೌಹಾರ್ದ ಭೇಟಿ

Published 16 ಅಕ್ಟೋಬರ್ 2023, 10:33 IST
Last Updated 16 ಅಕ್ಟೋಬರ್ 2023, 10:33 IST
ಅಕ್ಷರ ಗಾತ್ರ

ಮಂಗಳೂರು: ‘ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ದಸರಾ ಉತ್ಸವ ನಾಡಿಗೇ ಮಾದರಿ’ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ‌ಲಾರೆನ್ಸ್ ಮುಕುಝಿ ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಸೋಮವಾರ ಸೌಹಾರ್ದ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವ ಹಾಗೂ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡರು.

‘ನಾವೆಲ್ಲರೂ ದೇವರ ಮಕ್ಕಳು.ಮಾನವರಿಗೆ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ’ ಎಂದರು.

ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್ ಆರ್. , ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ರಾಧಾಕೃಷ್ಣ, ಮುಂಬೈ ಭಾರತ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಅವರು ‌ಲಾರೆನ್ಸ್ ಮುಕುಝಿ ಅವರನ್ನು ಆತ್ಮೀಯವಾಗಿ ಕ್ಷೇತ್ರಕ್ಕೆ ಬರಮಾಡಿಕೊಂಡರು.

ಕಂಕನಾಡಿ ಆಲ್ಫೋನ್ಸ್ ಚರ್ಚ್ ಧರ್ಮಗುರು ಫಾ.ಮಾಣಿ, ಬೆಳ್ತಂಗಡಿ ಧರ್ಮಪ್ರಾಂತ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೆಬಾಸ್ಟಿಯನ್ ಕೆ.ವಿ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT