ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್ ಮೊದಲ ವಾರದಿಂದ ತರಗತಿ

ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ
Last Updated 27 ಸೆಪ್ಟೆಂಬರ್ 2020, 2:56 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ವಿಶ್ವವಿದ್ಯಾ ಲಯದ ಪದವಿ ಹಾಗೂ ಸ್ನಾತಕೋತ್ತರ ತರಗತಿಗಳು ನವೆಂಬರ್ ಮೊದಲ ವಾರದಿಂದ ಆರಂಭಗೊಳ್ಳುವ ಸಾಧ್ಯತೆ ಇದೆ.

‘ನವೆಂಬರ್ 1ರಿಂದ ತರಗತಿಗಳ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಿರ್ದೇಶನ ನೀಡಿದ್ದು, ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ’ ಎಂದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಅ.20ರೊಳಗೆ ಫಲಿತಾಂಶ: ‘ವಿಶ್ವವಿದ್ಯಾ ಲಯದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ನಡೆಯುತ್ತಿದ್ದು, ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿವೆ. ಅಕ್ಟೋಬರ್ 20ರೊಳಗೆ ಫಲಿತಾಂಶ ನೀಡುವ ಉದ್ದೇಶವಿದೆ. ನವೆಂಬರ್ 1ರಿಂದಲೇ ಸ್ನಾತಕೋತ್ತರ ಪದವಿಯ ಪ್ರವೇಶಾತಿ ಆರಂಭಿಸುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದು ಅವರು ತಿಳಿಸಿದರು.

‘ಈ ಬಾರಿ ಆನ್‌ಲೈನ್ ಹಾಗೂ ಆಫ್‌ಲೈನ್‌ (ಎರಡರಲ್ಲೂ) ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಆದರೆ, ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ (ದಕ್ಷಿಣ ಕನ್ನಡ, ಉಡುಪಿ, ಕೊಡಗು) ಕೋವಿಡ್–19 ಸ್ಥಿತಿಗತಿಗಳನ್ನು ನೋಡಿಕೊಂಡು ಸರ್ಕಾರದ ಅನುಮತಿ ಪಡೆದುಕೊಳ್ಳುತ್ತೇವೆ’ ಎಂದು ವಿವರಿಸಿದರು.

ಡಿಜಿಟಲೈಸ್ಡ್‌ ಹಾಗೂ ವಿಕೇಂದ್ರೀಕೃತ ಮೌಲ್ಯಮಾಪನಗಳಿಗೆ ವಿಶ್ವವಿದ್ಯಾಲಯ ಸನ್ನದ್ಧವಾಗಿದೆ. ಕೋವಿಡ್–19 ಕಾರಣ ಸರ್ಕಾರ ನೀಡುವ ಮಾರ್ಗಸೂಚಿಯ ಪ್ರಕಾರ ಮೌಲ್ಯಮಾಪನ ನಡೆಸುತ್ತೇವೆ ಎಂದರು.

‘ನವೆಂಬರ್‌ 1ರಿಂದ ಮೊದಲ ವರ್ಷದ (ಪ್ರಥಮ ಸೆಮಿಸ್ಟರ್‌) ತರಗತಿ ಆರಂಭಿಸಬೇಕು’ ಎಂಬ ಯುಜಿಸಿ ನಿರ್ಧಾರವನ್ನು ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT