ಮಂಗಳೂರು: ‘ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯದಾದ್ಯಂತ ಇರುವ 5,500 ವಿದ್ಯಾರ್ಥಿ ನಿಲಯಗಳ 3.5 ಲಕ್ಷ ವಿದ್ಯಾರ್ಥಿಗಳು, ಇಲಾಖೆ ಸಿಬ್ಬಂದಿ, ಸಾರ್ವಜನಿಕ ಸಹಕಾರದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಕದ್ರಿಯ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಶನಿವಾರ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಚ್ಛತಾ ಕಾರ್ಯಕ್ಕೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣ ಇಲಾಖೆಗಳು ಸಹಕಾರ ನೀಡಿವೆ. ಸ್ವಚ್ಛತಾ ಅಭಿಯಾನ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಸಚಿನ್ ಕುಮಾರ್ ,ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ವಿಜಯ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.