ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ: ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

Published 11 ಡಿಸೆಂಬರ್ 2023, 14:17 IST
Last Updated 11 ಡಿಸೆಂಬರ್ 2023, 14:17 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ದೇವಸ್ಥಾನ ಹಾಗೂ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದೇವಸ್ಥಾನದ ಸಿಬ್ಬಂದಿ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕ್ಷೇತ್ರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸುಮಾರು 200 ಮಂದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು, ಭಕ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT