ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿಗೆ ಸಿ.ಎಂ. ಭೇಟಿ: ಸಾರಿಗೆ ವ್ಯತ್ಯಯ

Last Updated 16 ಮಾರ್ಚ್ 2023, 5:03 IST
ಅಕ್ಷರ ಗಾತ್ರ

ಮ೦ಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಇದೇ 16ರಂದು ಬೆಳಿಗ್ಗೆ 10ರಿಂದ ಫಲಾನುಭವಿಗಳ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ.

‘ಸಮ್ಮೇಳನಕ್ಕೆ ಆಗಮಿಸುವ ಫಲಾನುಭವಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯ ಮಂಗಳೂರು
ವಿಭಾಗದ ಬಸ್‌ಗಳನ್ನು ನಿಯೋಜಿಸಲು ಜಿಲ್ಲಾಡಳಿತದಿಂದ ಬೇಡಿಕೆ ಬಂದಿದೆ. ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಗಮದ ಬಸ್‌ಗಳನ್ನು ನಿಯೋಜಿಸಲಾಗಿದೆ. ಹಾಗಾಗಿ ಮ೦ಗಳೂರು–ಸ್ಟೇಟ್ ಬ್ಯಾಂಕ್-ಧರ್ಮಸ್ಥಳ–ಉಪ್ಪಿನಂಗಡಿ–ಸುಬ್ರಹ್ಮಣ್ಯ– ಕಾಸರಗೋಡು ಮಾರ್ಗದ ಸಾರಿಗೆ ಕಾರಾಚರಣೆಯಲ್ಲಿ ಗುರುವಾರ ಸ್ವಲ್ಪ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂದು ನಿಗಮದ
ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT