ರಕ್ಷಣೆ ಮಾಡಿದ ಎಲ್ಲ 9 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು.
ಬಂಡೆಗಳ ನಡುವೆ ಟಗ್ ಸಿಲುಕಿಕೊಂಡಿತ್ತು..
ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ.