ಗುರುವಾರ , ಜೂನ್ 17, 2021
21 °C

ತೌಕ್ತೆ‌ ಚಂಡಮಾರುತದ ಆತಂಕ: ಮೀನುಗಾರರಿಗೆ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PTI Photo

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತೌಕ್ತೆ ಚಂಡಮಾರುತ ಆತಂಕ ಉಂಟಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.

ಕರಾವಳಿಯ ಸಮುದ್ರ ತೀರಗಳಲ್ಲಿ ಕಡಲ್ಕೊರೆತ ಆರಂಭವಾಗಿದೆ. ಅಲೆಗಳು ಜೋರಾಗಿ ಅಪ್ಪಳಿಸುತ್ತಿದ್ದು, ನೂರಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ.

ಮೇ 16ರಂದು ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಾಗಿ ತೀವ್ರವಾಗಲಿದೆ. ಈ ಎಚ್ಚರಿಕೆ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರಿಕೆ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಕರಾವಳಿ‌ ಕಾವಲು ಪಡೆ ಸೂಚನೆ ನೀಡಿದೆ.

ಗಸ್ತು ತಿರುಗುತ್ತಿರುವ ಕಾವಲು ಪಡೆಯ ಹಡಗುಗಳು ಮತ್ತು ವಿಮಾನಗಳ ಮೂಲಕ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಎಚ್ಚರಿಕೆ ನೀಡಲಾಗುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು