ಸೋಮವಾರ, ಮೇ 17, 2021
23 °C
ಮಲ್ಪೆ ಸುತ್ತಮುತ್ತ ನೋಟಿಸ್ ಅಂಟಿಸಿದ ಪೊಲೀಸರು

ಉಗ್ರರ ನುಸುಳುವಿಕೆ ಭೀತಿ ಕರಾವಳಿಯಲ್ಲಿ ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಲಷ್ಕರ್‌ ಇ ತಯಬಾ (ಎಲ್‌ಇಟಿ) ಉಗ್ರ ಸಂಘಟನೆಯ ಆರು ಜನರ ತಂಡ ತಮಿಳುನಾಡು ಪ್ರವೇಶಿಸಿರುವ ಮಾಹಿತಿ ಇದ್ದು, ಕರ್ನಾಟಕದ ಕರಾವಳಿ ಭಾಗದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಕರಾವಳಿ ಕಾವಲು ಪಡೆ ಪೊಲೀಸರು ಪಾಕಿಸ್ತಾನದ ಶಂಕಿತ ಉಗ್ರನ ಚಿತ್ರ ಹಾಗೂ ವಿವರಗಳನ್ನೊಳಗೊಂಡಿರುವ ಪ್ರಕಟಣೆಯನ್ನು ಮಲ್ಪೆ ಬಂದರು, ಪಡುಕೆರೆ ಬೀಚ್‌, ಕೆಮ್ಮಣ್ಣು, ಹೂಡೆ ಪ್ರದೇಶಗಳಲ್ಲಿ ಅಂಟಿಸಿದ್ದಾರೆ.

ಆರು ಜನ ಉಗ್ರರಲ್ಲಿ ಒಬ್ಬ ಪಾಕಿಸ್ತಾನದ ಪ್ರಜೆಯೂ ಸೇರಿದ್ದಾನೆ. ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಲಾಗಿದೆ. ಶಂಕಿತರು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಇದೇ ವೇಳೆ ನಗರದ ಪ್ರಮುಖ ಸ್ಥಳಗಳು, ಬಂದರು ಹಾಗೂ ಪ್ರವಾಸಿ ತಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಗಸ್ತು ಹೆಚ್ಚಿಸಲಾಗಿದೆ ಎಂದು ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು