ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ | ನೂತನ ಕಟ್ಟಡ, ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ

ಪಿಲಾತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ
Last Updated 25 ಜೂನ್ 2022, 15:43 IST
ಅಕ್ಷರ ಗಾತ್ರ

ಬಂಟ್ವಾಳ: ಹಾಲಿನ ಗುಣಮಟ್ಟ ಕಾಯ್ದುಕೊಂಡಾಗ ಜಾಗತಿಕ ಮಟ್ಟದಲ್ಲಿ ಉತ್ಪನ್ನಗಳಿಗೆ ಮಾರುಕಟ್ಟೆ ಲಭಿಸಲಿದ್ದು, ಯುವಜನತೆ ಸ್ವ ಉದ್ಯೋಗಕ್ಕೆ ಮುಂದಾಗಬೇಕು ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಇಲ್ಲಿನ ಮೂರ್ಜೆಯಲ್ಲಿ ಪಿಲಾತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ನಿರ್ಮಿಸಿದನೂತನ ಕಟ್ಟಡ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಸಾಂದ್ರ ಶೀತಲೀಕರಣ ಘಟಕ ಉದ್ಘಾಟಿಸಿ ಮಾತನಾಡಿದರು. ಒಕ್ಕೂಟವು ಗುಣಮಟ್ಟ ಕಾಯ್ದುಕೊಳ್ಳುವಿಕೆ ಜೊತೆಗೆ ಹಾಲಿನ ಉತ್ಪನ್ನಗಳಿಗೆ ಆದ್ಯತೆ ನೀಡುತ್ತಿದೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂದ ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ ಮಿನಿ ಸಭಾಂಗಣ ಉದ್ಘಾಟಿಸಿದರು. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಗೋದಾಮು ಉದ್ಘಾಟಿಸಿದರು.

ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಬಿ.ಸುಧಾಕರ ರೈ, ಸುಭದ್ರರಾವ್, ಸವಿತಾ ಎನ್ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಪಿಲಾತಬೆಟ್ಟು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉಡುಪ, ಒಕ್ಕೂಟದ ವ್ಯವಸ್ಥಾಪಕ ಡಾ. ನಿತ್ಯಾನಂದ ಭಕ್ತ, ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷ ರವಿಶಂಕರ್ ಹೊಳ್ಳ, ಎಂ.ಬೂಬ ಸಪಲ್ಯ ಇದ್ದರು.

ವಿಸ್ತರಣಾಧಿಕಾರಿ ಜಗದೀಶ್ ಎ. ಸ್ವಾಗತಿಸಿ, ಕಾರ್ಯದರ್ಶಿ ಜಯಲಕ್ಷ್ಮಿ ಪ್ರಾಸ್ತವಿಕವಾಗಿ ಮಾತನಾಡಿದರು. ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಕಲಾವಿದ ಎಚ್‌ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT