ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ

Last Updated 25 ಜೂನ್ 2022, 4:47 IST
ಅಕ್ಷರ ಗಾತ್ರ

ಪುತ್ತೂರು: ಜ್ಞಾನ ಎನ್ನುವುದು ಅತಿ ಶಕ್ತಿಶಾಲಿ ಅಸ್ತ್ರ. ಇದರಿಂದ ನಾವು ಯಾರನ್ನೂ, ಯಾವುದನ್ನೂ ಮಣಿಸುವುದಕ್ಕೆ ಸಾಧ್ಯ ಎಂದು ಬೆಂಗಳೂರಿನ ಸೋನಾ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಯಜ್ಞ ನಾರಾಯಣ ಕಮ್ಮಾಜೆ ಹೇಳಿದರು.

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ವಾರ್ಷಿಕೋತ್ಸವ ‘ವಿಬ್‍ಜಯಾರ್-2022’ ಸಮಾರಂಭದಲ್ಲಿ ಅವರು ಮಾತಾಡಿದರು.

‘ಪ್ರತಿಯೊಬ್ಬರಲ್ಲಿಯೂ ಜಗತ್ತನ್ನೇ ಬೆರಗಾಗಿಸುವ ಪ್ರತಿಭೆಯಿದೆ. ನಾನು ಇಂಗ್ಲಿಷ್ ಮಾಧ್ಯಮದಲ್ಲಿ ಓದಿದ್ದಲ್ಲ, ನಾನು ಗ್ರಾಮಾಂತರದಲ್ಲಿ ಓದಿದವ ಎನ್ನುವ ಮನಸ್ಸಿನ ಭಾವನೆಯ ಕೀಳರಿಮೆಯಿಂದ ಹೊರಬಂದಾಗ ಎಲ್ಲರೂ ತಿರುಗಿ ನೋಡುವ ರೀತಿಯಲ್ಲಿ ಬೆಳವಣಿಗೆಯನ್ನು ಕಾಣಬಹುದು. ವರ್ತನೆ ಮತ್ತು ನಾಯಕತ್ವವನ್ನು ಯಾರಿಂದಲೂ ಎರವಲು ಪಡೆಯುವುದು ಸಾಧ್ಯವಿಲ್ಲ. ಬದಲಾಗಿ ನಾಯಕತ್ವ, ಶಿಸ್ತು ಮತ್ತು ಸಂವಹನ ಕಲೆಯನ್ನು ನಮಗೆ ನಾವೇ ಪರಿಣಾಮಕಾರಿಯಾಗಿ ಬೆಳೆಸಿಕೊಂಡಾಗ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬಹುದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ‘ತಪ್ಪು ಇತಿಹಾಸವನ್ನು ಬೋಧಿಸುವ ಕೆಲಸ ನಿರಂತರವಾಗಿ ನಡೆದಿದ್ದು, ಇದರ ಬದಲು ಸ್ವಾಭಿಮಾನ ನಿರ್ಮಾಣ ಮಾಡುವ ಪಠ್ಯಗಳನ್ನು ಬೋಧಿಸಬೇಕಾಗಿದೆ ಎಂದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ ಪರೀಕ್ಷೆಯಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ 3ನೇ ರ‍್ಯಾಂಕ್ ಗಳಿಸಿದ ರಂಜನ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 8ನೇ ರ‍್ಯಾಂಕ್ ಗಳಿಸಿದ ಕೃತಿಕಾ ಕೆ. ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸುಬ್ರಹ್ಮಣ್ಯ ಭಟ್ ಟಿ.ಎಸ್. ತಮ್ಮ ವೈಯಕ್ತಿಕ ನೆಲೆಯಲ್ಲಿ ಚಿನ್ನದ ನಾಣ್ಯವನ್ನಿತ್ತು ಗೌರವಿಸಿದರು. ಶೈಕ್ಷಣಿಕವಾಗಿ ಪ್ರತಿ ವಿಭಾಗದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ತೋರಿದ ಪ್ರತಿಭಾವಂತರಿಗೆ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಪ್ರತಿಭಾ ಪ್ರದರ್ಶನದಲ್ಲಿ ಸಾಧನೆಯನ್ನು ಮಾಡಿದವರನ್ನು ಗೌರವಿಸಲಾಯಿತು.

ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ, ಖಜಾಂಚಿ ಅಚ್ಯುತ ನಾಯಕ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಹ್ಮಣ್ಯ ಭಟ್ ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್, ನಿರ್ದೇಶಕರಾದ ರವಿಕೃಷ್ಣ ಡಿ.ಕಲ್ಲಾಜೆ, ಸತ್ಯನಾರಾಯಣ ಬಿ, ಡಾ.ಯಶೋದಾ ರಾಮಚಂದ್ರ, ಸಂತೋಷ್ ಕುತ್ತಮೊಟ್ಟೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಚೇತನ್ ಪಿ.ಡಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀಜಾ ಶೆಟ್ಟಿ ಮತ್ತು ಧನುಶ್ ಕೇವಳ, ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ರೂಪಲೇಖಾ, ಪ್ರತಿಭಾವಂತ ದತ್ತಿ ನಿಧಿಯನ್ನು ನೀಡಿದ ವಿವೇಕಾನಂದ ಪದವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎ.ವಿ ನಾರಾಯಣ, ಪ್ರೊ.ವತ್ಸಲಾ ರಾಜ್ಞಿ, ಶಶಿಕಲಾ ಇದ್ದರು.

‌ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ. ವಾರ್ಷಿಕ ವರದಿ ಮಂಡಿಸಿದರು. ಶಿಫಾಲಿ ರೈ ಸ್ವಾಗತಿಸಿದರು. ಶ್ರೀಜಾ ಶೆಟ್ಟಿ ವಂದಿಸಿದರು. ದಿಶಾ ಮತ್ತು ಚೈತ್ರಾ ಸಾಲಿಯಾನ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT