ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ | ವಿದ್ಯಾಸಂಸ್ಥೆಗಳಲ್ಲಿ ಮೌಲ್ಯಧಾರಿತ ಶಿಕ್ಷಣ: ಎಲ್. ನರೊನ್ಹಾ

ಸೇಕ್ರೆಡ್ ಹಾರ್ಟ್ ಕಾಲೇಜು ಮಾಣಿಕ್ಯೋತ್ಸವದಲ್ಲಿ ಮ್ಯಾಕ್ಸಿಮ್ ನರೊನ್ಹಾ
Last Updated 3 ಡಿಸೆಂಬರ್ 2022, 7:33 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ವಿದ್ಯಾಸಂಸ್ಥೆಗಳು ನಿರಂತರ ಪ್ರವಹಿಸುವ ನದಿಯಾಗಿವೆ. ಕಥೋಲಿಕ್ ಶಿಕ್ಷಣ ಮಂಡಳಿಯ ಆಡಳಿತಕ್ಕೆ ಒಳಪಟ್ಟ ವಿದ್ಯಾಸಂಸ್ಥೆಗಳು ಮೌಲ್ಯಧಾರಿತ ಶಿಕ್ಷಣವನ್ನು ನೀಡುತ್ತಿದೆ’ ಎಂದು ಮಂಗಳೂರು ಧರ್ಮ ಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜರ್ ಮ್ಯಾಕ್ಸಿಮ್ ಎಲ್. ನರೊನ್ಹಾ ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆದ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಮಾಣಿಕ್ಯೋತ್ಸವ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಆಂಟನಿ ಎಂ. ಸೆರಾ, ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ನಿರ್ದೇಶಕ ಅರುಣ್ ಪುಟಾರ್ಡೊ, ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ದೀಪಕ್ ಡೇಸಾ, ಪುಂಜಾಲಕಟ್ಟೆ ಕ್ಲಸ್ಟರ್‌ನ ಸಿ.ಆರ್.ಪಿ ಚೇತನಾ, ನಿವೃತ್ತ ಪ್ರಾಂಶುಪಾಲರಾದ ಲಾರೆನ್ಸ್ ರೊಡ್ರಿಗಸ್, ಬ್ಯಾಪ್ಟಿಸ್ಟ್ ಮಿರಾಂದ, ಮ್ಯಾಥ್ಯೂ ಎನ್.ಎಂ, ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಹಾಗೂ ಕಾಲೇಜು ವಿಭಾಗದ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವಿಶ್ವನಾಥ ಪೂಜಾರಿ, ಕುಮಾರ ನಾಯ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮ್ಯಾಕ್ಸಿನ್ ಆಲ್ಬುಕರ್ಕ್, ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರನೀಲ್ ಮಸ್ಕರೇನ್ಹಸ್, ಭವಿಷ್ಯ ಶೆಟ್ಟಿ ಇದ್ದರು.

ನಿವೃತ್ತ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ಕಾಲೇಜು ಸ್ಮರಣ ಸಂಚಿಕೆ ‘ವಿಷನ್’ನನ್ನು ಬಿಡುಗಡೆಗೊಳಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕ ಬೇಸಿಲ್ ವಾಸ್ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಜೆರೊಮ್ ಡಿಸೋಜ ವರದಿ ವಾಚಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ಸಂಸ್ಥಾಪಕ ಲಿಗೋರಿ ಡಿಸೋಜ ನುಡಿನಮನ ಸಲ್ಲಿಸಿದರು. ಶಿಕ್ಷಕರಾದ ಗ್ರೇಸ್ ಲೀನಾ ವಂದಿಸಿದರು. ಹೇಮಲತಾ, ಎಂ.ಶಾಂತಿ ಮೇರಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT