ಉಳ್ಳಾಲ: ತಲಪಾಡಿಯಲ್ಲಿರುವ ಶಾರದಾ ವಿದ್ಯಾಲಯ ಕಟ್ಟಡದ ಮೇಲೆ ಅಳವಡಿಸಿದ್ದ ಶೀಟ್ ಚಾವಣಿ ಭಾರಿ ಮಳೆ–ಗಾಳಿಗೆ ಉರುಳಿ ಕೆಳಗೆ ಬಿದ್ದಿದೆ.
ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಆರು ಮಹಡಿಯ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಇದನ್ನು ಅಳವಡಿಸಲಾಗಿತ್ತು.
ಶೀಟ್ ಚಾವಣಿ ಉರುಳಿ ಬಿದ್ದಿದ್ದರಿಂದ ಹಲವು ವಾಹನಗಳು ಜಖಂಗೊಂಡಿವೆ.
ಭಾರಿ ಮಳೆ ಕಾರಣ ಸತತ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ–ಕಾಲೇಜುಗಳಿಗೆ ಜಿಲ್ಲಾ ಆಡಳಿತ ರಜೆ ಘೋಷಿಸಿದೆ. ಹೀಗಾಗಿ ಈ ಶಾಲೆಗೂ ರಜೆ ಇತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.