ಶುಕ್ರವಾರ, ಡಿಸೆಂಬರ್ 4, 2020
24 °C

ಮಂಗಳೂರಿನಲ್ಲಿ ಕಾಲೇಜುಗಳ ಆರಂಭ; ಮೊದಲ ದಿನ ಕಾಣದ ಉತ್ಸಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಸೇರಿದಂತೆ ಜಿಲ್ಲೆಯ ಪರಿಗಣಿತ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳ ತರಗತಿಗಳು ಮಂಗಳವಾರ ಆರಂಭಗೊಂಡಿದ್ದರೂ, ಕೋವಿಡ್ ಪೂರ್ವದ ಉತ್ಸಾಹ ಕಂಡುಬರಲಿಲ್ಲ.

ಬಹುತೇಕ ವಿಶ್ವವಿದ್ಯಾಲಯ, ಕಾಲೇಜುಗಳ  ವಿವಿಧ ವಿಭಾಗಗಳಲ್ಲಿ  ಶೇ30 ರಷ್ಟೇ ವಿದ್ಯಾರ್ಥಿಗಳು ಕಂಡು ಬಂದರು.

ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಪಡೆಯುವುದು ತೊಡಕಾಗಿದೆ. ಇನ್ನೂ ಕೆಲವು ವಿದ್ಯಾರ್ಥಿಗಳ ಪೋಷಕರು ಕೆಲದಿನಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ಗೆ ಒಗ್ಗಿಕೊಂಡಿದ್ದಾರೆ. ಅವರೆಲ್ಲ ಬಂದಿಲ್ಲ ಎಂದು ಹೆಚ್ಚಿನ ಪ್ರಾಧ್ಯಾಪಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಸೆಂಬರ್ 1ರಿಂದ ಸಹಜ ಸ್ಥಿತಿಗೆ ಬರಬಹುದು ಎಂದು ನಿರೀಕ್ಷೆ ವ್ಯಕ್ತಪಡಿಸಿದರು.

ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಬಳಕೆ, ಅಂತರ ಕಾಪಾಡಲು ಸೂಚನೆಗಳು ನೀಡುತ್ತಿರುವುದು ಸಾಮಾನ್ಯವಾಗಿ ಕಂಡುಬಂತು. ಆದರೆ, ಮೊದಲ ದಿನ ಗಂಭೀರವಾಗಿ ತರಗತಿಗಳು ನಡೆಯುತ್ತಿರುವುದು ಕಂಡುಬರಲಿಲ್ಲ.


ಕೋವಿಡ್‌ ಸುರಕ್ಷಾ ಕ್ರಮಗಳ ಬಗ್ಗೆ ಕಾಲೇಜು ಸಿಬ್ಬಂದಿ ಸಮಾಲೋಚನೆ ನಡೆಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು