ಶನಿವಾರ, ಜುಲೈ 2, 2022
23 °C

ಸಮಿತಿ ವರದಿ ಆಧರಿಸಿ ಕ್ರಮ: ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಯುದ್ಧಪೀಡಿತ ಉಕ್ರೇನ್‍ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳು ಕಲಿಕೆ ಮುಂದುವರಿಸುವ ನಿಟ್ಟಿನಲ್ಲಿ ನೇಮಿಸಿರುವ ಸಮಿತಿ ಶೀಘ್ರ ವರದಿ ನೀಡಲಿದೆ. ಅದನ್ನು ಪರಿಶೀಲಿಸಿ, ಕಾನೂನು ಚೌಕಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಕ್ರೇನ್‍ನಲ್ಲಿ ಯುದ್ಧ ಇನ್ನೂ ಮುಂದುವರಿದಿದೆ. ಇಲ್ಲಿನ ವಿದ್ಯಾರ್ಥಿಗಳು ಮತ್ತೆ ಅಲ್ಲಿಗೆ ತೆರಳಿ ಶಿಕ್ಷಣ ಮುಂದುವರಿಸುವ ಬಗ್ಗೆ ಅನಿಶ್ಚಿತತೆ ಇದೆ. ರಾಜ್ಯದ ಸುಮಾರು 700 ವಿದ್ಯಾರ್ಥಿಗಳು ಅಲ್ಲಿಂದ ಹಿಂತಿರುಗಿದ್ದಾರೆ. ಇಲ್ಲಿರುವ ಮೆಡಿಕಲ್ ಕಾಲೇಜುಗಳಲ್ಲಿ ಅವರು ಅಧ್ಯಯನ ಮಾಡುತ್ತಿರುವ ವರ್ಷದ ವ್ಯಾಸಂಗವನ್ನೇ ಮುಂದುವರಿಸಲು ಅವಕಾಶ ಕಲ್ಪಿಸಬೇಕು ಎಂಬ ಯೋಚನೆ ಸರ್ಕಾರಕ್ಕೆ ಇದೆ’ ಎಂದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು