ಸೋಮವಾರ, ನವೆಂಬರ್ 23, 2020
22 °C
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ

ಸೌಲಭ್ಯ ಅಲಭ್ಯ: ವೈದ್ಯರ ಕೊರತೆ

ಮೋಹನ್‌ ಕುತ್ತಾರ್‌ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಲ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಸೂತಿ ವಿಭಾಗ ಪರಿಣಾಮಕಾರಿಯಾಗಿ ಕಾರ್ಯಾಚರಿಸುತ್ತಿದೆ. ಆದರೆ, ಇತರ ವಿಭಾಗಗಳಲ್ಲಿ ವೈದ್ಯರ ಕೊರತೆ ಹಾಗೂ ಸವಲತ್ತುಗಳ ಕೊರತೆ ಇರುವುದರಿಂದ ರೋಗಿಗಳಿಗೆ ಪರಿಣಾಮಕಾರಿಯಾದ ಚಿಕಿತ್ಸೆಗಳು ದೊರೆಯುತ್ತಿಲ್ಲ.

ಎರಡು ಮಹಡಿಯ ಸುಸಜ್ಜಿತ ಕಟ್ಟಡದಲ್ಲಿ ಪ್ರಸೂತಿ, ಮಕ್ಕಳ ಹಾಗೂ ವೈದ್ಯಕೀಯ ವಿಭಾಗಗಳು ಇವೆ. 30 ಬೆಡ್‍ಗಳ ವ್ಯವಸ್ಥೆ, ಏಳು ಮಂದಿ ವೈದ್ಯರು ಹಾಗೂ 30 ಮಂದಿ ಗುತ್ತಿಗೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಪ್ರತ್ಯೇಕ ಆಯುಷ್ ವಿಭಾಗವೂ ಇದೆ. ಹೋಮಿಯೋಪಥಿ, ಯುನಾನಿ ಔಷಧ ಪದ್ಧತಿಯಡಿ ಚಿಕಿತ್ಸೆ ದೊರೆಯುತ್ತದೆ. ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಸಂದರ್ಭದಲ್ಲಿ ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು, ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಿದ್ದರು. ಉಳ್ಳಾಲ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರವು ತಾಲ್ಲೂಕು ಆಸ್ಪತ್ರೆ
ಯಾಗಿ ಬದಲಾಗುವ ನಿರೀಕ್ಷೆಯಿದೆ.

‘ದೆಹಲಿ ನಿಜಾಮುದ್ದೀನ್‌ಗೆ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಜಿಲ್ಲೆಯಲ್ಲಿ ಮೊದಲ ಪ್ರಕರಣವಾಗಿದ್ದರಿಂದ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ವೈದ್ಯರಿಗೆ ಬಹಳ ಜವಾಬ್ದಾರಿಯಿತ್ತು. ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಉಳ್ಳಾಲದಲ್ಲಿ ರ್‍ಯಾಂಡಮ್ ಪರೀಕ್ಷೆ ನಡೆಸಿದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿ ಕಂಡುಬಂದಿತ್ತು. ಸಿಬ್ಬಂದಿ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ’ ಎನ್ನುತ್ತಾರೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಶಾಂತ್

ಸಮುದಾಯ ಕೇಂದ್ರಕ್ಕೆ ಸೆಂಟ್ರಲೈಸ್ಡ್ ಆಕ್ಸಿಜನ್ ಕನೆಕ್ಷನ್ ಬಂದಲ್ಲಿ ಜಿಲ್ಲಾ ಆಸ್ಪತ್ರೆಯಂತೆ ಉಳ್ಳಾಲದ ಆಸ್ಪತ್ರೆಯೂ ಕಾರ್ಯನಿರ್ವಹಿಸಬಹುದು. ಸ್ಕ್ಯಾನಿಂಗ್ ಯಂತ್ರ, ಮರಣೋತ್ತರ ಪರೀಕ್ಷೆಯ ಉಪಕರಣಗಳು ಹಾಗೂ ಸಿಬ್ಬಂದಿ ವ್ಯವಸ್ಥೆ ಆದಲ್ಲಿ ತಾಲ್ಲೂಕಿನ ಜನ ಮಂಗಳೂರಿನ ಆಸ್ಪತ್ರೆಯನ್ನು ಆಶ್ರಯಿ ಸುವುದು ತಪ್ಪುತ್ತದೆ. ದಿನಕ್ಕೆ 200ರಷ್ಟು ರೋಗಿಗಳು ಆಸ್ಪತ್ರೆಗೆ ಬರು
ತ್ತಾರೆ. ಅದಕ್ಕೆ ತಕ್ಕಷ್ಟು ವೈದ್ಯರು, ಸಿಬ್ಬಂದಿ ಇಲ್ಲ ಎನ್ನುತ್ತಾರೆ ಸ್ಥಳೀಯರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.