ಮಂಗಳೂರು: ‘ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿರುವುದಾಗಿ ಹೇಳಿರುವ ವ್ಯಕ್ತಿಯು ವಕೀಲರ ಮೂಲಕ ತಲೆಬುರುಡೆ ಮತ್ತು ಅವಶೇಷದ ಕೆಲಭಾಗಗಳು ಇರುವ ಎರಡು ಕಲರ್ ಫೋಟೊಗಳ ಝೆರಾಕ್ಸ್ ಪ್ರತಿಯನ್ನು ಮಾತ್ರ ಸಲ್ಲಿಸಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

‘ದೂರುದಾರ ವ್ಯಕ್ತಿಯು ವಕೀಲರ ಮೂಲಕ ಬಿಡುಗಡೆ ಮಾಡಿರುವ ಪ್ರಕಟಣೆಯನ್ನು ನೋಡಿ ಹಲವರು ಕಳೇಬರದ ಕುರಿತು ವಿಚಾರಿಸಿದ್ದಾರೆ. ಆದರೆ, ದೂರಿಗೆ ಸಂಬಂಧಿಸಿ ಯಾವುದೇ ಕಳೇಬರ ಈವರೆಗೆ ಪೊಲೀಸ್ ಠಾಣೆಗೆ ಸಲ್ಲಿಕೆಯಾಗಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೇಬರವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ಹೇಳಿದ್ದ ವ್ಯಕ್ತಿಯೊಬ್ಬರು ಜು.3ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನ್ಯಾಯಾಲಯದ ಅನುಮತಿ ಪಡೆದು ಈ ಸಂಬಂಧ ಬಿಎನ್ಎಸ್ ಕಲಂ 211(ಎ)ಅಡಿ ಜು.4ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೂರುದಾರರು ತಮ್ಮ ಹೆಸರು ಮತ್ತು ಮಾಹಿತಿಯನ್ನು ಗೋಪ್ಯವಾಗಿ ಇಡುವಂತೆ ದೂರಿನಲ್ಲಿ ವಿನಂತಿಸಿಕೊಂಡ ಕಾರಣ ಅವರ ವಿವರವನ್ನು ಬಹಿರಂಗಗೊಳಿಸಲಾಗದು ಎಂದು ಪೊಲೀಸರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.