ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು

ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ
Published 26 ಡಿಸೆಂಬರ್ 2023, 23:14 IST
Last Updated 26 ಡಿಸೆಂಬರ್ 2023, 23:14 IST
ಅಕ್ಷರ ಗಾತ್ರ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಘಟಕದ ವತಿಯಿಂದ, ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಕಲ್ಲಡ್ಕ ಪ್ರಭಾಕರ ಭಟ್ ಅವರು ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ  ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮುಸ್ಲಿಮರ  ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ,ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ಘಟಕ ಅಧ್ಯಕ್ಷೆ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸದಸ್ಯರಾದ ವಕೀಲೆ ಅಸ್ಮಾ ಮತ್ತು ಸೌದಾ ಬೆಳ್ತಂಗಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT