ಪುತ್ತೂರು: ‘ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ, ಪರಿಶಿಷ್ಟ ಜಾತಿ ಸಮುದಾಯದ ನಾಯಕರೂ ಆಗಿರುವ ಛಲವಾದಿ ನಾರಾಯಣಸ್ವಾಮಿ ಅವರನ್ನು ಮತ್ತು ಛಲವಾದಿ ಸಮುದಾಯವನ್ನು ಕೀಳು ಪದಗಳಿಂದ ನಿಂದಿಸಿ ಸಮುದಾಯಗಳ ನಡುವೆ ದ್ವೇಷ ಭಾವನೆ ಬರುವ ರೀತಿಯಲ್ಲಿ ಸಾರ್ವಜನಿಕವಾಗಿ ಮಾತನಾಡಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಎ.ಸಿ.ಮೋರ್ಚಾ ಅಧ್ಯಕ್ಷ ಲೋಹಿತ್ ಅಮ್ಚಿನಡ್ಕ ಪುತ್ತೂರು ನಗರ ಪೊಲೀಸ್ ಠಾಣೆಗೆ ಸೋಮವಾರ ದೂರು ನೀಡಿದ್ದಾರೆ.

‘ಸಾಂವಿಧಾನಿಕವಾಗಿ ಉನ್ನತ ಹುದ್ದೆಯಲ್ಲಿರುವ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಶಾಸಕ ಅಶೋಕ್ಕುಮಾರ್ ರೈ ಅವರ ಬಗ್ಗೆ ಕೀಳೂ ಮಟ್ಟದ ಶಬ್ದ ಬಳಸಿ ಟೀಕಿಸಿದ್ದಾರೆ. ಜಾತಿ ನಿಂದನೆ ಮಾಡುವ ಭಾವನೆಯಲ್ಲಿ ಮಾತನಾಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.