ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಅಭಿವೃದ್ಧಿ ಮಂಡಳಿಯು ಕರಾವಳಿ ಅಭಿವೃದ್ಧಿ ಸಂಬಂಧಿಸಿ, ಸಮಗ್ರ ಯೋಜನೆ ರೂಪಿಸಿ, ಶೀಘ್ರ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು.

ಸೋಮವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರು ಮಾತನಾಡಿದರು.

ಯು.ಎಸ್.ಮಲ್ಯ, ಜನಾರ್ದನ ಪೂಜಾರಿ, ವೀರಪ್ಪ ಮೊಯಿಲಿ, ಆಸ್ಕರ್ ಫರ್ನಾಂಡಿಸ್ ಅವರಂತಹ ನಾಯಕರ ದೂರದರ್ಶಿತ್ವದ ಫಲವಾಗಿ ದಕ್ಷಿಣ ಕನ್ನಡ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ಇದೇ ಮಾರ್ಗದಲ್ಲಿ ಯೋಜನೆಗಳನ್ನು ರೂಪಿಸಿ, ಕರಾವಳಿಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು. ಸರ್ಕಾರ ಈ ಹಿಂದೆ ನೀಡಿದ ಭರವಸೆಯಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿ ದರ್ಜೆಗೆ ಏರಿಸಿದೆ ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ರಾಜ್ಯ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ವಿರೋಧ ಪಕ್ಷಗಳು, ನಮ್ಮ ಯೋಜನೆಗಳನ್ನು ನಕಲು ಮಾಡಿ ಬೇರೆ ರಾಜ್ಯಗಳಲ್ಲಿ ಅನುಷ್ಠಾನಗೊಳಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ನಮ್ಮ ಯೋಜನೆಗಳನ್ನು ನಕಲು ಮಾಡಿದ್ದಾರೆ. ಯಾವುದೇ ಮಧ್ಯವರ್ತಿಗಳು ಇಲ್ಲದೆ ನೇರವಾಗಿ ಸರ್ಕಾರದ ನೆರವನ್ನು ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ವಿವಿಧ ನಿಗಮ– ಮಂಡಳಿಗಳ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಮಂಜುನಾಥ ಪೂಜಾರಿ, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ವಿಶ್ವಾಸ್ ಕುಮಾರ್ ದಾಸ್, ಲಾವಣ್ಯ ಬಲ್ಲಾಳ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಉಪಾಧ್ಯಕ್ಷ ಜೆ.ಆರ್. ಲೋಬೊ, ಕಾಂಗ್ರೆಸ್ ಪ್ರಮುಖರಾದ ಜಯಪ್ರಕಾಶ್ ಹೆಗ್ಡೆ, ರಮಾನಾಥ ರೈ, ಅಶೋಕ್ ಕೊಡವೂರು, ಪದ್ಮರಾಜ್ ಪೂಜಾರಿ, ಪ್ರತಿಭಾ ಕುಳಾಯಿ, ಅಪ್ಪಿಲತಾ ಇದ್ದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧಿಕಾರಿ ಪ್ರದೀಪ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು.

‘ಪುಸ್ತಕಗಳಲ್ಲಿ ಮಹಾತ್ಮ ಗಾಂಧಿ’ ಮಹಾತ್ಮ ಗಾಂಧಿ ಅವರನ್ನು ಮರೆಯುತ್ತಿರುವ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ 10.5 ಕೋಟಿ ಪಠ್ಯಪುಸ್ತಕಗಳಲ್ಲಿ ಗಾಂಧಿ ಚಿತ್ರ ಹಾಗೂ ಸಂವಿಧಾನದ ಪೀಠಿಕೆಯನ್ನು ಮುದ್ರಿಸುವ ಮೂಲಕ ವಿರೋಧಿಸುವವರ ಮನೆಯಲ್ಲೂ ಗಾಂಧಿ ನೆನಪಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಮಂಡಳಿಯ ವ್ಯಾಪ್ತಿ ಜಿಲ್ಲೆ;ತಾಲ್ಲೂಕುಗಳು ದಕ್ಷಿಣ ಕನ್ನಡ;9 ಉಡುಪಿ;7 ಉತ್ತರ ಕನ್ನಡ;12 ಒಟ್ಟು;28 ಪ್ರಾಧಿಕಾರದ ಅಡಿಯಲ್ಲಿ ಈವರೆಗೆ ನಡೆದ ಕಾಮಗಾರಿ ತೂಗುಸೇತುವೆ/ಕಾಲುಸಂಕ;268 ಒಟ್ಟು ವೆಚ್ಚ;₹34.51 ಕೋಟಿ ಮೀನು ಮಾರುಕಟ್ಟೆಗಳು;11 ಒಟ್ಟು ವೆಚ್ಚ;₹21.02 ಕೋಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.