ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪಿನ್‌ ರಾವತ್‌ ದೇಶದ ಆಸ್ತಿ ಆಗಿದ್ದರು: ಅಭಯಚಂದ್ರ ಜೈನ್

ಮೂಡುಬಿದಿರೆ: ಬಿಪಿನ್ ರಾವತ್‌ಗೆ ಶ್ರದ್ಧಾಂಜಲಿ
Last Updated 10 ಡಿಸೆಂಬರ್ 2021, 16:29 IST
ಅಕ್ಷರ ಗಾತ್ರ

ಮೂಡುಬಿದಿರೆ: ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಜತೆಗಿದ್ದ ಇತರ ಹನ್ನೆರಡು ಮಂದಿಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಶುಕ್ರವಾರ ವಿವಿಧ ಸಂಘ, ಸಂಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅಭಯಚಂದ್ರ ಜೈನ್ ಮಾತನಾಡಿ, ರಾವತ್ ಅವರು ದೇಶಕ್ಕೆ ದೊಡ್ಡ ಆಸ್ತಿ ಆಗಿದ್ದರು. ಅವರ ಅಜ್ಜ, ತಂದೆ ಕೂಡ ಸೇನೆಯಲ್ಲಿ ಕೆಲಸ ಮಾಡಿದವರು. ಆದರೆ, ಅವರನ್ನು ಮೀರಿಸುವ ವ್ಯಕ್ತಿತ್ವ ಮತ್ತು ನಿಪುಣತೆ ರಾವತ್ ಹೊಂದಿದ್ದರು ಎಂದರು.

ಡಾ.ಎಂ. ಮೋಹನ ಅಳ್ವ ಮಾತನಾಡಿ, ಮೂರು ಸೇನಾ ಪಡೆಗಳ ಮಧ್ಯೆ ಉತ್ತಮ ಸಂವಹನ ಬೆಳೆಸಿಕೊಂಡು ಬಂದಿರುವ ರಾವತ್ ದೇಶೀಯ ಶಸ್ತ್ರಾಸ್ತ್ರ ಉತ್ಪಾದನೆಗೆ ಒತ್ತು ಕೊಟ್ಟಿದ್ದರು ಎಂದರು.

ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕೆ.ಆರ್ ಪಂಡಿತ್ ಮಾತನಾಡಿದರು.

ರೋಟರಿ ಕ್ಲಬ್ ಅಧ್ಯಕ್ಷ ಜೆ.ಡಬ್ಲ್ಯು.ಪಿಂಟೊ, ಕಾರ್ಯದರ್ಶಿ ಡಾ.ಆಶೀರ್ವಾದ್, ಜೈನ್ಮಿಲನ್ ಅಧ್ಯಕ್ಷ ನಮಿರಾಜ್ ಜೈನ್, ಮಹಾವೀರ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ರಾಧಾಕೃಷ್ಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ. ರಮೇಶ್ ಭಟ್, ಎಸ್ಎನ್ಎಂ ಪಾಲಿಟೆಕ್ನಿಕ್‌ ಪ್ರಾಚಾರ್ಯ ಜೆ.ಜೆ. ಪಿಂಟೊ, ಉದ್ಯಮಿ ಶ್ರೀಪತಿ ಭಟ್, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್,ಪುರಸಭಾ ಸದಸ್ಯ ಸುರೇಶ್ ಪ್ರಭು ಇದ್ದರು. ಡಾ.ಪುಂಡಿಕಾಯ್ ಗಣಪಯ್ಯ ಭಟ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT