ಶುಕ್ರವಾರ, ಆಗಸ್ಟ್ 12, 2022
22 °C
ಪುಷ್ಪ ನಮನ ಸಲ್ಲಿಸಿದ ಕುಲಪತಿ

ಕವಿ ಸಿದ್ಧಲಿಂಗಯ್ಯಗೆ ಶ್ರದ್ಧಾಂಜಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಣಾಜೆ(ಮಂಗಳಗಂಗೋತ್ರಿ): ಸಾಹಿತಿ ಡಾ.ಸಿದ್ಧಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆಯಿತು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅವರು ಸಿದ್ಧಲಿಂಗಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ‘ಸಿದ್ಧಲಿಂಗಯ್ಯ ಅವರು ಅನ್ಯಾಯ, ಅಸಮಾನತೆಯ ವಿರುದ್ಧ ಕಾವ್ಯಗಳ ಮೂಲಕ ಪ್ರತಿಭಟಿಸಿ, ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದರು’ ಎಂದರು.

ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ಸೋಮಣ್ಣ ಮಾತನಾಡಿದರು. ಕನ್ನಡ ವಿಭಾಗದ ಚಂದ್ರಶೇಖರ್ ಅವರು ಸಿದ್ಧಲಿಂಗಯ್ಯ ಅವರ ಕವನ ವಾಚಿಸಿದರು. ಸಂಶೋಧನಾ ವಿದ್ಯಾರ್ಥಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು