ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈವಸ್ಥಾನಗಳ ಕಾಣಿಕೆ ಹುಂಡಿಗೆ ಕಾಂಡೋಮ್, ಅವಹೇಳನಕಾರಿ ಬರಹ

ಬಿಜೆಪಿ ಮುಖಂಡರ ಚಿತ್ರಗಳು ವಿರೂಪ
Last Updated 20 ಜನವರಿ 2021, 6:52 IST
ಅಕ್ಷರ ಗಾತ್ರ

ಮಂಗಳೂರು: ಉಳ್ಳಾಲದ ಕೇಂದ್ರ ಬಸ್‌ ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಮತ್ತು ನಿಂದನಾರ್ಹ ಬರಹಗಳುಳ್ಳ ಭಿತ್ತಿಪತ್ರವನ್ನು ಹಾಕಿ ವಿಕೃತಿ ಮೆರೆದಿದ್ದಾರೆ.

ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಇನ್ನಿತರ ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ಅವಹೇಳನಕಾರಿ ಬರಹಗಳನ್ನು ಬರೆಯಲಾಗಿದೆ.
ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತಿ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಹೊಂದಿದ್ದು, ಈ ಬಾರಿ ಸ್ವಲ್ಪ ತಡವಾಗಿ ಅಂದರೆ ಮಂಗಳವಾರ ಸಂಜೆ ಕಾಣಿಕೆ ಡಬ್ಬಿ ತೆರೆದಿದ್ದು, ಡಬ್ಬಿಯ ಒಳಗೆ ಕಾಂಡೋಮ್‌ಗಳು ಹಾಗೂ ಪ್ರಚೋದನಕಾರಿ ಬರಹಗಳು ಇದ್ದಂತಹ ಪ್ಲೆಕ್ಸ್‌ ಒಂದು ಕಂಡು ಬಂದಿದೆ.

ಬೆಂಗಳೂರಿನ ಕೆ.ಆರ್‌. ಐಡಿಯಲ್‌ ನಿಗಮದ ಅಧ್ಯಕ್ಷ ಎಂ ರುದ್ರೇಶ್‌ ಅವರಿಗೆ ಶುಭಕೋರಿದ ಫ್ಲೆಕ್ಸ್‌ ಇದಾಗಿದ್ದು, ಇದರಲ್ಲಿ ಸಿಎಂ ಬಿಎಸ್‌ವೈ, ಪುತ್ರ ವಿಜಯೇಂದ್ರ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಭಾವಚಿತ್ರಗಳಿದ್ದು, ಎಲ್ಲವನ್ನೂ ಕೂಡಾ ಗೀಚಿ ವಿರೂಪಗೊಳಿಸಲಾಗಿದೆ.

''ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು, ದೇವ ಲೋಕದಿಂದ ಹೊರ ಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು, ವಿಗ್ರಹಗಳ ಮೂಲಕ ಭೂ ಲೋಕದ ಜನರನ್ನು ಭ್ರಷ್ಟರನ್ನಾಗಿಸಿ, ನಕಲಿ ದೇವರಾಗಿ ಅನಾದಿಕಾಲದಿಂದ ಮೆರೆಯಲ್ಪಡುತ್ತಿದೆ. ಎಚ್ಚರ, ರಕ್ಷ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ ಬಾಚಿ ತಿಂದು ತೇಗುವ ಈ ಅಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹಿಡಿದು ಕೊಲ್ಲಬೇಕಾಗಿದೆ. ಜನರು ಸಿದ್ದರಾಗಬೇಕು'' ಎಂದು ಫ್ಲೆಕ್ಸ್‌ನಲ್ಲಿ ಬರೆಯಲಾಗಿದೆ.
ಈ ಬಗ್ಗೆ ಕೊರಗಜ್ಜ ಸೇವಾ ಸಮಿತಿಯವರು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ.

ಕೆಲದಿನಗಳ ಹಿಂದೆ ನಗರದ ಮೂರು ದೈವಸ್ಥಾನಗಳಲ್ಲೂ ಕಾಣಿಕೆ ಹುಂಡಿಗೆ ಇದೇ ರೀತಿ ಅವಹೇಳನಕಾರಿ ಬರಹ, ಕಾಂಡೋಮ್ ಹಾಕಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT