ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು | ನೀಟ್ ಮರು ಪರೀಕ್ಷೆಗೆ ಕಾಂಗ್ರೆಸ್ ಆಗ್ರಹ

Published 2 ಜುಲೈ 2024, 16:15 IST
Last Updated 2 ಜುಲೈ 2024, 16:15 IST
ಅಕ್ಷರ ಗಾತ್ರ

ಮಂಗಳೂರು: ನೀಟ್ ಪರೀಕ್ಷೆ ಹಗರಣದಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದ್ದು, ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎನ್‌ಎಸ್‌ಯುಐ ಸದಸ್ಯರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಮಾತನಾಡಿ, ಕೇಂದ್ರ ಸರ್ಕಾರ ನಡೆಸುವ ನೀಟ್‌ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಸ್ತುತ ನಡೆಯುತ್ತಿರುವ ತನಿಖೆ ಬಗ್ಗೆ ವಿಶ್ವಾಸ ಇಲ್ಲದಂತಾಗಿದ್ದು, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು’ ಎಂದರು.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಹಗರಣವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಜಂಟಿ ಆಶ್ರಯದಲ್ಲಿ ಮಂಗಳವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿದರು.

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಪ್ರಮುಖರಾದ ಶಶಿಧರ್ ಹೆಗ್ಡೆ, ಕೆ. ಅಶ್ರಫ್, ಸವಾದ್ ಸುಳ್ಯ, ಸುಹಾನ್ ಆಳ್ವ, ಸುಖ್ವಿಂದರ್ ಸಿಂಗ್, ವಿಶ್ವಾಸ್‌ಕುಮಾರ್ ದಾಸ್, ನಝೀರ್ ಬಜಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT