ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಅಭಿವೃದ್ದಿ ಆಗಿದ್ದು ಭ್ರಷ್ಟಾಚಾರದಲ್ಲಿ ಮಾತ್ರ: ಸಲೀಂ ಅಹ್ಮದ್

Last Updated 20 ಮೇ 2022, 8:20 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಸಾಧನೆ ಶೂನ್ಯವಾಗಿದೆ. ಈ ಸರ್ಕಾರ ಬಂದ ಮೇಲೆ ರಾಜ್ಯದ ಜನರ ಅಭಿವೃದ್ಧಿ ಆಗಿಲ್ಲ, ರಾಜ್ಯದಲ್ಲಿ ಆಗಿದ್ದು ಭ್ರಷ್ಟಾಚಾರದ ಅಭಿವೃದ್ಧಿ ಮಾತ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಶೇ. 40ರ ಕಮಿಷನ್‌ನಿಂದಾಗಿ ರಾಜ್ಯದ ಜನ ತಲೆತಗ್ಗಿಸುವಂತಾಗಿದೆ.

ಎಲ್ಲಾ ಹಂತಗಳಲ್ಲೂ ಭ್ರಷ್ಟಾಚಾರ ಮಿತಿ ಮೀರಿದ್ದು, ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಮಾಧ್ಯಮ, ಜನ ಆಡಿಕೊಳ್ಳುತ್ತಿರುವಂತೆ ಸಿಎಂ ಸ್ಥಾನಕ್ಕೆ ₹ 2,500 ಕೋಟಿ, ಸಚಿವ ಸ್ಥಾನಕ್ಕೆ ₹ 100 ಕೋಟಿ, ಪೊಲೀಸ್ ನೇಮಕಾತಿ ಸೇರಿದಂತೆ ಹೋಟೆಲ್ ಮೆನುಕಾರ್ಡ್ ರೀತಿಯಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ ಸಾಗಿದೆ. ಲೂಟಿಕೋರರ ಸರ್ಕಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ಹೇಳಿದರು.

ಜನತೆ ಬದಲಾವಣೆ ಬಯಸಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಜನವಿರೋಧಿ ನೀತಿಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ 76 ಲಕ್ಷ ಹೊಸ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಕರ್ನಾಟಕದಲ್ಲಿ ದಾಖಲೆಯ ಸದಸ್ಯತ್ವ ನೋಂದಣಿಯಾಗಿದೆ ಎಂದರು.

ಬಿಜೆಪಿಗೆ ಅಧಿಕಾರಕ್ಕೆ ಬರುವ ಧೈರ್ಯ ಇಲ್ಲದಿರುವುದರಿಂದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡುತ್ತಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT