ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ಬುಧವಾರ ನಾಮಪತ್ರ ಸಲ್ಲಿಸಿದರು.

ಪದ್ಮರಾಜ್ ಅವರು ಕುದ್ರೋಳಿ ಕ್ಣೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಅವರ ಜೊತೆ ಗೋಕರ್ಣನಾಥ ದೇವರು, ಪರಿವಾರ ದೇವರಿಗೆ ಹಾಗೂ ನಾರಾಯಣ ಗುರುಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಹಮ್ಮಿಕೊಂಡ ಮೆರವಣಿಗೆಗೆ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಗಾರುಡಿ ಗೊಂಬೆ ಬಳಗ, ಚೆಂಡೆವಾದನ, ಕೊಂಬು ಕಹಳೆಗಳು ಮೆರವಣಿಗೆ ಗೆ ನೆರುಗು ನೀಡಿದವು. ಕಾಂಗ್ರೆಸ್ ಧ್ವಜ ಹಿಡಿದು ಜಯಘೋಷ ಕೂಗುತ್ತಾ ಕಾರ್ಯಕರ್ತರು ಮೆರವಣಿಗೆಯುದ್ದಕ್ಕೂ ಹೆಜ್ಜೆ ಹಾಕಿದರು.ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜಗಳ ಜೊತೆ ತುಳುನಾಡ ಧ್ವಜವೂ ರಾರಾಜಿಸುತ್ತಿತ್ತು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಢಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಚುನಾವಣಾ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇನಾಯತ್ ಅಲಿ ಮೊದಲಾದವರು ಭಾಗವಹಿಸಿದ್ದರು.

ಪದ್ಮರಾಜ್ ಅವರು ಬುಧವಾರ ಬೆಳಿಗ್ಗೆ ಶರವು ಮಹಾಗಣಪತಿ ದೇವಸ್ಥಾನ, ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,' ಪ್ರಜಾಪ್ರಭುತ್ವದ ಕಗ್ಗೊಲೆಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಸುಳ್ಳು ಪ್ರಕರಣ ದಾಖಲಿಸಿ ವಿರೋಧ ಪಕ್ಷದವರನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದೆ. ಕೇಂದ್ತ ಸರ್ಕಾರವು ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಸಿರುವುದು ಜನರ ಗಮನದಲ್ಲಿದೆ' ಎಂದರು.

'ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆದ್ದು ಜಯಭೇರಿ ಭಾರಿಸಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಪದ್ಮರಾಜ್ ಆರ್.ಪೂಜಾರಿ ಅವರೂ ಗೆಲುವು ಸಾಧಿಸಲಿದ್ದಾರೆ ಎಂದರು.

ಅಭ್ಯರ್ಥಿ ಪದ್ಮರಾಜ್ ಮಾತನಾಡಿ,' ಕಾರ್ಯಕರ್ತರ ಕಷ್ಟಗಳ ಅರಿವು ನನಗಿದೆ. ಗೆದ್ದ ಬಳಿಕ 60 ತಿಂಗಳ ಕಾಲ ನಿಮ್ಮ ಜೊತೆಗೇ ಇದ್ದು ಸಮಸ್ಯೆಗಳಿಗೆ ಸ್ಪಂದಿಸಲಿದ್ದೇನೆ. ಕಾಂಗ್ರೇಸ್ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನೇ ಮುಂದಿಟ್ಟು ಮತ ಯಾಚಿಸೋಣ. ಸರ್ವ ಧರ್ಮ ಸಮನ್ವಯ ಜಿಲ್ಲೆಯ ವೈಶಿಷ್ಟ್ಯ. ಅದನ್ನು ಪುನಃಸ್ಥಾಪನೆ ಮಾಡಲು ಪ್ರಯತ್ನಿಸೋಣ ಎಂದರು.

ಬಳಿಕ ಅಭ್ಯರ್ಥಿ ಪದ್ಮರಾಜ್ ಅವರು ಪಕ್ಷದ ಮುಖಂಡರ ಜಿತೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.