ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾಕ್ಕೆ ರಮ್‌ ಮದ್ದು ಅಂದಿದ್ದ ನಗರ ಸಭೆ ಸದಸ್ಯ: ಅಮಾನತು ಮಾಡಿದ ಕಾಂಗ್ರೆಸ್

Last Updated 5 ಡಿಸೆಂಬರ್ 2022, 13:09 IST
ಅಕ್ಷರ ಗಾತ್ರ

ಉಳ್ಳಾಲ: `ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಯಬಿಟ್ಟ ಉಳ್ಳಾಲ ನಗರಸಭೆಯ ಸದಸ್ಯ ರವಿಚಂದ್ರ ಗಟ್ಟಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಾಂಗ್ರೆಸ್ ಅಮಾನತುಗೊಳಿಸಿದೆ.

ನಗರಸಭೆ ಸದಸ್ಯ ರವಿಚಂದ್ರ ಗಟ್ಟಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಪಾನಮತ್ತರಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮೈಮೇಲಿನ ಬಟ್ಟೆಗಳನ್ನು ಕಳಚಿ ಬಿದ್ದುಕೊಂಡಿದ್ದರು. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿರುತ್ತಾರೆ. ಈಚೆಗೆ ನಡೆದ ಉಳ್ಳಾಲ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಭಾಗವಹಿಸದೇ, ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನುತಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT