ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಅಪಪ್ರಚಾರಕ್ಕೆ ಕಾರ್ಯಕರ್ತರಿಂದ ತಕ್ಕ ಉತ್ತರ: ಮಾನಾಥ ರೈ

Published 29 ಮಾರ್ಚ್ 2024, 13:36 IST
Last Updated 29 ಮಾರ್ಚ್ 2024, 13:36 IST
ಅಕ್ಷರ ಗಾತ್ರ

ಮೂಲ್ಕಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಸಹಿತ ಅನೇಕ ಜನಪ್ರಿಯ ಯೋಜನೆಗಳು ಜಾರಿಗೆ ಬಂದಿದ್ದು, ಜನರ ಬದುಕು ಹಸನಾಗಿದೆ. ಬಿಜೆಪಿಯವರು ಅಪಪ್ರಚಾರದ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳಲು ಕುತಂತ್ರ ನಡೆಸುತ್ತಿದ್ದು, ಜನರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಬಗ್ಗೆ ಕಾರ್ಯಕರ್ತರು ಮಾಹಿತಿ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬಹುದು’ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಹಳೆಯಂಗಡಿಯ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿ ಆಡಳಿತದಿಂದ ಜಿಲ್ಲೆಯ ಅಭಿವೃದ್ಧಿ ಸ್ಥಗಿತಗೊಂಡಿದೆ. ಜನರಲ್ಲಿ ಕೋಮು ಸಾಮರಸ್ಯ ಭಾವನೆ ಕಡಿಮೆಯಾಗುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯ ಜತೆಗೆ ಬೀಚ್‌ಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ವೀಕ್ಷಕ ವಸಂತ್ ಬರ್ನಾಡ್‌, ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರಮುಖರಾದ ಮಂಜುನಾಥ ಕಂಬಾರ, ಗುರುರಾಜ್ ಎಸ್.ಪೂಜಾರಿ, ಅಶೋಕ್, ಶಾಹುಲ್ ಹಮೀದ್ ಬಜ್ಪೆ, ಪ್ರಮೋದ್ ಕುಮಾರ್, ಸುರೇಶ್, ಹಸನಬ್ಬ, ಆಲ್ವಿನ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT