ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿ:ಅಶೋಕ್‌ಕುಮಾರ್‌

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ
Published 13 ಏಪ್ರಿಲ್ 2024, 14:04 IST
Last Updated 13 ಏಪ್ರಿಲ್ 2024, 14:04 IST
ಅಕ್ಷರ ಗಾತ್ರ

ಪುತ್ತೂರು: ಜನರ ಸಂಕಷ್ಟ ಕಂಡ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಐದು ಗ್ಯಾರಂಟಿಯನ್ನು ಜಾರಿ ಮಾಡಿದೆ. ಗ್ಯಾರಂಟಿಯಿಂದಾಗಿ ರಾಜ್ಯದ ಪ್ರತಿ ಕುಟುಂಬವೂ ನಿಟ್ಟುಸಿರು ಬಿಡುವಂತಾಗಿದೆ. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿಗಳು ಅನುಷ್ಠಾನಗೊಳ್ಳಲಿವೆ ಎಂದು ಶಾಸಕ ಅಶೋಕ್‌ಕುಮಾರ್‌ ರೈ ಹೇಳಿದರು.

ಪುತ್ತೂರು ತಾಲ್ಲೂಕಿನ ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ದೇಶದಲ್ಲಿ 60 ವರ್ಷ ಆಡಳಿತ ನಡೆಸಿ ಹಲವು ರೀತಿಯಲ್ಲಿ ಅಭಿವೃದ್ಧಿ ಮಾಡಿದೆ. ಆದರೆ ಕಳೆದ ಹತ್ತು ವರ್ಷ ಆಡಳಿತ ಮಾಡಿದವರು ಬೆಲೆ ಏರಿಕೆ ಮಾಡಿ ಜನ ಪರದಾಡುವಂತೆ ಮಾಡಿದ್ದಾರೆ ಎಂದರು.

ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ದೇಶ ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದು ಜನತೆಗೆ ಅರಿವಾಗಿದೆ. ಒಬ್ಬ ವ್ಯಕ್ತಿಯ ಹೆಸರು ಹೇಳಿಕೊಂಡು ಮತಯಾಚಿಸುವ ಬಿಜೆಪಿಗೆ ಅಭಿವೃದ್ಧಿಯೇ ಗೊತ್ತಿಲ್ಲ ಎಂದರು.

ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಉಪಾಧ್ಯಕ್ಷ ಮೌರಿಶ್ ಮಸ್ಕರೇನಸ್, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಮುರಳೀಧರ್ ರೈ ಮಠಂತಬೆಟ್ಟು, ಬೆಟ್ಟಂಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ, ಪಕ್ಷದ ಮುಖಂಡರಾದ ಕೃಷ್ಣಪ್ರಸಾದ್ ಆಳ್ವ, ಹರೀಶ್ ಕೋಟ್ಯಾನ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT