ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರದ ಬೊಕ್ಕಸ ತುಂಬುವವರೂ ಗ್ಯಾರಂಟಿ ಫಲಾನುಭವಿಗಳೇ’

Published 9 ಮಾರ್ಚ್ 2024, 14:55 IST
Last Updated 9 ಮಾರ್ಚ್ 2024, 14:55 IST
ಅಕ್ಷರ ಗಾತ್ರ

ಬಂಟ್ವಾಳ: ರಾಜ್ಯ ಅಥವಾ ಕೇಂದ್ರ ಸರ್ಕಾರದ ಬೊಕ್ಕಸ ತುಂಬಲು ಗ್ಯಾರಂಟಿ ಫಲಾನುಭವಿಗಳೇ ಮುಖ್ಯ ಕಾರಣ ಎಂಬುದನ್ನು ಗ್ಯಾರಂಟಿ ಯೋಜನೆ ವಿರೋಧಿಗಳು ಅರ್ಥೈಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಶನಿವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗುತ್ತದೆ ಎಂಬ ಆರೋಪದ ನಡುವೆಯೇ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನ ಗೊಂಡಿರುವುದಕ್ಕೆ ಈ ಸಮಾವೇಶದಲ್ಲಿ ಸೇರಿದ ಜನಸಂದಣಿಯೇ ಸಾಕ್ಷಿ ಎಂದು ಅವರು ಹೇಳಿದರು.

ವಿಧಾನಪರಿಷತ್ ಸದಸ್ಯರಾದ ಕೆ.ಹರೀಶ ಕುಮಾರ್, ಬಿ.ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್.ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮಾತನಾಡಿದರು.‌

ತಹಶೀಲ್ದಾರ್ ಅರ್ಚನಾ ಡಿ.ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಮ್ತಾಜ್ , ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣ ಭಟ್, ಕೆಎಸ್‌ಆರ್‌ಟಿಸಿ ಅಧಿಕಾರಿ ಜಯಕರ ಶೆಟ್ಟಿ, ಜಿಲ್ಲಾ ಕೌಶಲ್ಯಾಧಿಕಾರಿ ಪ್ರದೀಪ್ ಡಿಸೋಜ ಮಾಹಿತಿ ನೀಡಿದರು.

ಫಲಾನುಭವಿಗಳು ಅನಿಸಿಕೆ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ಆನಂದ್., ಸಹಾಯಕ ಕಮಿಷನರ್ ರಾಜು, ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಯಪ್ರಕಾಶ್ ಭಾಗವಹಿಸಿದ್ದರು.

ತಹಶೀಲ್ದಾರ್ ಅರ್ಚನಾ ಡಿ.ಭಟ್ ಸ್ವಾಗತಿಸಿದರು.

ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ರಾಜೀವ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.

ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಸಾರ್ವಜನಿಕರು
ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಸಾರ್ವಜನಿಕರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT