ಸೋಮವಾರ, ಮೇ 16, 2022
30 °C
ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟನೆ

ನಗರದಲ್ಲಿ ಭಾವೈಕ್ಯ ಸಮಾವೇಶ 22ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ‘ಭಾವೈಕ್ಯತಾ ಸಮಾವೇಶ’ ಫೆ.22ರಂದು ಮಧ್ಯಾಹ್ನ 2:30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಸಯೀದ್ ಅಹ್ಮದ್, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ ಖಾದರ್, ಮುಖಂಡರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಗಂಗಾಧರ ಗೌಡ, ಐವನ್ ಡಿಸೋಜ, ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ವಸಂತ ಬಂಗೇರ, ಶಕುಂತಳಾ ಶೆಟ್ಟಿ, ಡಾ.ರಘು, ಮಿಥುನ್ ರೈ ಪಾಲ್ಗೊಳ್ಳುವರು’ ಎಂದರು.

ಲುಕ್ಮಾನ್ ಬಂಟ್ವಾಳ, ವಿಶ್ವಾಸ್ ‌ಕುಮಾರ್ ದಾಸ್, ಶಶಿಧರ ಹೆಗ್ಡೆ, ರವೂಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಅಶ್ರಫ್ ಬಜಾಲ್, ಪ್ರಕಾಶ್ ಸಾಲ್ಯಾನ್, ಶಬೀರ್ ಸಿದ್ಧಕಟ್ಟೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು