ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಶೋಕ್ ಕುಮಾರ್ ಶೆಟ್ಟಿ ರಾಜೀನಾಮೆ
ವಿಟ್ಲ: ಪಟ್ಟಣ ಪಂಚಾಯಿತಿ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಜಿ ಅಧ್ಯಕ್ಷೆ ದಮಯಂತಿ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಶೋಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿದ್ದರು. ಈ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಪಟ್ಟಣ ಪಂಚಾಯಿತಿ ಆಡಳಿತ ಇದೇ 15ಕ್ಕೆ ಕೊನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಅವರು ರಾಜೀನಾಮೆ ನೀಡಿರುವುದು ಕುತೂಹಲ ಮೂಡಿಸಿದೆ.
ಇವರಿಬ್ಬರೂ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.