ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಸೈಕಲ್ ಜಾಥಾ, ಪಾದಯಾತ್ರೆ

ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ಬೆಲೆ ಏರಿಕೆ ನೀತಿಗೆ ವಿರೋಧ
Last Updated 8 ಜುಲೈ 2021, 4:15 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರಗಳ ತೈಲ ಬೆಲೆ ಏರಿಕೆ ನೀತಿ ವಿರೋಧಿಸಿ ಮಂಗಳೂರು ದಕ್ಷಿಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಇಲ್ಲಿಯ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಿಂದ ಮಂಗಳೂರು ಮಹಾನಗರ ಪಾಲಿಕೆ ಕಾರ್ಯಾಲಯದವರೆಗೆ ಸೈಕಲ್ ಜಾಥಾ, ಪಾದಯಾತ್ರೆ ನಡೆಸಿ ಪ್ರತಿಭಟಿಸಲಾಯಿತು.

ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಮಾತನಾಡಿ, ‘ಬೆಲೆ ಏರಿಕೆಯಿಂದ ಜನರ ಜೀವನ ಕಷ್ಟಕರವಾಗಿದೆ. ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಏರಿಸಿರುವುದರಿಂದ ಮಧ್ಯಮ-ಬಡ ಜನರ ಬದುಕು ದುಸ್ತರವಾಗಿದೆ. ಮೋದಿ ನೇತೃತ್ವದ ಸರ್ಕಾರ ಬಡವರ, ರೈತರ, ಕಾರ್ಮಿಕರ ಪರವಾಗಿಲ್ಲ. ಅದಾನಿ, ಅಂಬಾನಿ ಇವರ ಏಳಿಗೆಗಾಗಿ ಇರುವ ಸರ್ಕಾರ. ಇಂತಹ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂದರು.

ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಇದ್ದ ತೈಲ ಬೆಲೆ ವಿರುದ್ಧ ಪ್ರತಿಭಟಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿಯ ಇತರ ನಾಯಕರು ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು. ಒಳ್ಳೆಯ ದಿನಗಳನ್ನು ಕೊಡುತ್ತೇವೆ ಎಂದು ಹೇಳಿ ಅಧಿಕಾರ ಪಡೆದ ನರೇಂದ್ರ ಮೋದಿ, ಯುವಕರಿಗೆ ಉದ್ಯೋಗ ನೀಡುತ್ತೇನೆಂದು ಮೋಸ ಮಾಡಿದ್ದಾರೆ. ಏರುತ್ತಿರುವ ಬೆಲೆಗಳನ್ನು ಇಳಿಸದಿದ್ದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಬಿ. ಸಾಲ್ಯಾನ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಪಾಲಿಕೆಯ ಸದಸ್ಯರು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲಾ-ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT