ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕರಿಗೆ ಕಿರುಕುಳ: ಪ್ರತಿಭಟನೆ

ಬಿಜೆಪಿ ವಿರುದ್ಧ ದ್ವೇಷ ರಾಜಕಾರಣದ ಆರೋಪ
Last Updated 22 ಜೂನ್ 2022, 2:21 IST
ಅಕ್ಷರ ಗಾತ್ರ

ಪುತ್ತೂರು: ಕೇಂದ್ರ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಮಂಗಳವಾರ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್‌ಎಸ್ಸೆಸ್ ಚಡ್ಡಿ ಧರಿಸಿಕೊಳ್ಳಲಿ. ಪಠ್ಯ ಪುಸ್ತಕ ಕೇಸರೀಕರಣ ಮಾಡಲು ಹೋಗಿ ಮರ್ಯಾದೆ ಕಳೆದುಕೊಂಡ ಬಿಜೆಪಿ ಸರ್ಕಾರ ಇದೀಗ ಅಗ್ನಿಪಥ್ ಮತ್ತೊಂದು ದೊಡ್ಡ ರದ್ಧಾಂತ ಎಬ್ಬಿಸಿದೆ ಎಂದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮಾತನಾಡಿ, ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಪ್ರಭಾವ ಕುಗ್ಗಿಸಲು ಕಿರುಕುಳ ನೀಡಲಾಗುತ್ತಿದೆ ಎಂದರು.

ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದ್ ಆಲಿ ಮಾತನಾಡಿ, ಸಾವಿರಾರು ಕೋಟಿಯ ಸರ್ಕಾರದ ಆಸ್ತಿ ಪಡೆದ ಅಂಬಾನಿ ಮತ್ತು ಅದಾನಿ, ಹಣ ದುರುಪಯೋಗವಾದ ಪಿ.ಎಂ.ಕೇರ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಈಶ್ವರಪ್ಪ ಬ್ಗೆ ಏಕೆ ತನಿಖೆ ನಡೆಸುತ್ತಿಲ್ಲ ಎಂದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಎನ್ಎಸ್‌ಯುಐ ಮುಖಂಡ ಭಾತಿಷಾ ಅಳಕೆಮಜಲು ಮತ್ತಿತರರು ಮಾತನಾಡಿದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ಕೆ, ಬ್ಲಾಕ್ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಪ್ರಧಾನ ಕಾರ್ಯದರ್ಶಿಗಳಾದ ಅಸ್ಮಾ ಗಟ್ಟಮನೆ, ವೀಣಾ ನಾಯಕ್, ತಾಲ್ಲೂಕು ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಎಸ್ಸಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್, ಸಾಮಾಜಿಕ ಜಾಲ ತಾಣ ಘಟಕದ ಅಧ್ಯಕ್ಷ ಸಿದ್ದೀಕ್ ಸುಲ್ತಾನ್, ಪಕ್ಷದ ಮುಖಂಡರಾದ ಎ.ಕೆ.ಜಯರಾಮ ರೈ, ಬಾಬು ರೈ ಕೋಟೆ, ರಾಮಚಂದ್ರ ಸೊರಕೆ, ಗಿರೀಶ್ ಗೋಲ್ವಾಲ್ಕರ್, ದಾಮೋದರ್ ಭಂಡಾರ್ಕರ್, ಐತ್ತಪ್ಪ ಪೇರಲ್ತಡ್ಕ, ಜಯಂತಿ ಬಲ್ನಾಡು, ಮೂಸಾನ್, ವಿಶಾಲಾಕ್ಷ್ಮಿ ಬನ್ನೂರು, ರಾಮ ಮೇನಾಲ, ಸಿರಿಲ್ ರೋಡ್ರಿಗಸ್, ಯೂಸುಫ್ ಸಾಲ್ಮರ, ಸಹನಾಜ್ ಬಪ್ಪಳಿಗೆ ,ವಿಕ್ಟರ್ ಪಾಯಸ್, ಇಸ್ಮಾಯಿಲ್ ಸಾಲ್ಮರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT