ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟಂಪಾಡಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬ್ಯಾನರ್ ತೆರವು ವಿಚಾರದಲ್ಲಿ ಬಿಜೆಪಿ ಸದಸ್ಯರ ಉದ್ಧಟತನ- ಆರೋಪ
Last Updated 26 ಫೆಬ್ರುವರಿ 2023, 7:26 IST
ಅಕ್ಷರ ಗಾತ್ರ

ಪುತ್ತೂರು: ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್ ತೆರವುಗೊಳಿಸಿರುವುದರ ವಿರುದ್ಧ ಬೆಟ್ಟಂಪಾಡಿ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಉದ್ಧಟತನ ತೋರಿ ಸಭೆ ರದ್ದುಪಡಿಸಿದ್ದಾರೆ ಎಂದು ಆರೋಪಿಸಿ ಇರ್ದೆ-ಬೆಟ್ಟಂಪಾಡಿ ಗ್ರಾಮೀಣ ಕಾಂಗ್ರೆಸ್ ನೇತೃತ್ವದಲ್ಲಿ ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮಾತನಾಡಿ, ‘ಸರ್ಕಾರದ ಹಣ ತಂದು ತನ್ನ ಪ್ರತಿಷ್ಠೆಗಾಗಿ ಅನಧಿಕೃತ ಬ್ಯಾನರ್ ಅಳವಡಿಸಿದ್ದನ್ನು ಪಿಡಿಒ ತೆರವುಗೊಳಿಸಿದರೆ ಅದನ್ನು ಖಂಡಿಸಿ ಬಹಿಷ್ಕಾರ ಹಾಕುವುದು ಸರಿಯಲ್ಲ’ ಎಂದು ಪ್ರಶ್ನಿಸಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮಾತನಾಡಿ, ನ್ಯಾಯಾಲಯದ ಆದೇಶವನ್ನು ಪರಿಗಣಿಸಿ, ಜವಾಬ್ದಾರಿಯುತ ಅಧಿಕಾರಿಯಾಗಿ ಅನಧಿಕೃತ ಬ್ಯಾನರ್‌ ಪಿಡಿಒ ತೆರವುಗೊಳಿಸಿದ್ದಾರೆ. ಆದರೆ, ಅದರ ವಿರುದ್ಧ ಸಾಮಾನ್ಯ ಸಭೆಯನ್ನು ಬಹಿಷ್ಕರಿಸುವುದು ಅಹಂಕಾರದ ಪರಮಾವಧಿ ಎಂದು ದೂರಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮಾತ ನಾಡಿ, ಯಾರೇ ಅನಧಿಕೃತ ಬ್ಯಾನರ್ ಅಳವಡಿಸಿದರೆ ಪಿಡಿಒ ತೆರವುಗೊ ಳಿಸುತ್ತಾರೆ. ಕಾನೂನು ಎಲ್ಲರಿಗೂ ಒಂದೇ. ಪಿಡಿಒ ಮಾಡಿದ ಕಾರ್ಯ ತಪ್ಪಾಗಿದ್ದರೆ ನೀವು ರಾಜೀನಾಮೆ ನೀಡಬೇಕಿತ್ತು. ಅಧಿಕಾರದಲ್ಲಿದ್ದ ನೀವೇ ಬಹಿಷ್ಕಾರ ಹಾಕುವುದು ನಾಚಿಕೆಗೇಡಿನ ವಿಚಾರ ಎಂದರು.

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್ ಆಳ್ವ, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಮುಂಡೂರು ಗ್ರಾಮ ಪಂಚಾಯಿತಿ ಸದಸ್ಯ ಕಮಲೇಶ್ ಎಸ್.ಡಿ, ಕಾಂಗ್ರೆಸ್ ಜಿಲ್ಲಾ ಸಮಿತಿಯ ಸದಸ್ಯ ಐತ್ತಪ್ಪ ಪೇರಲ್ತಡ್ಕ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೀತಾ ಭಟ್, ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಇರ್ದೆ- ಬೆಟ್ಟಂಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ, ಕಾಂಗ್ರೆಸ್ ಮುಖಂಡ ಆಲಿಕುಂಞಿ ಕೊರಿಂಗಿಲ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಶಿಕಿರಣ್ ರೈ ನೂಜಿಬೈಲು, ಬ್ಲಾಕ್ ಎಸ್ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಮೊಯಿದು ಕುಂಞಿ ಕೋನಡ್ಕ, ಸುಮಲತಾ, ಲಲಿತಾ, ಮಹಾಲಿಂಗ ನಾಯ್ಕ, ಸ್ಥಳೀಯ ಮುಖಂಡರಾದ ಕೆ.ಪಿ.ಭಟ್ ಕೋನಡ್ಕ, ಭವಾನಿ ಹುಕ್ರಪ್ಪ ಗೌಡ, ಆನಂದ ನಾಯ್ಕ ಕಟೀಲ್ತಡ್ಕ, ಪರಮೇಶ್ವರ ನಾಯ್ಕ ದೂಮಡ್ಕ, ಅಬೂಬಕ್ಕರ್ ಕೊರಿಂಗಿಲ, ಮಹಾಲಿಂಗ ನಾಯ್ಕ, ಸದಾಶಿವ ರೈ, ಅಚ್ಚುತ ಉಪ್ಪಳಿಗೆ, ಶರೀಫ್ ನೋಂಡ್ರಿಮಾರ್, ಖಾಸಿಂ ಪೇರಲ್ತಡ, ಅಝೀಝ್ ಪೇರಲ್ತಡ್ಕ, ರಾಯಲ್ ಶರೀಫ್, ಅಬೂಬಕ್ಕರ್ ಕೊರಿಂಗಿಲ, ಯಾಕೂಬ್ ಕೂಟತ್ತಾನ, ಅಬ್ದುಲ್ ಅಝೀಜ್ ಪೇರಲ್ತಡ್ಕ, ಆಸೀಫ್ ಪೇರಲ್ತಡ್ಕ, ಕುಂಞಿ ಗುಡ್ಯಡ್ಕ, ಭಾಸ್ಕರ ಕರ್ಕೇರ, ಹರೀಶ್ ಕುಮಾರ್ ನಿಡ್ಪಳ್ಳಿ, ಸುಲೈಮಾನ್ ಪೇರಲ್ತಡ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT