ಮಂಗಳೂರು: ರಾಜ್ಯದಲ್ಲಿ ಈ ಹಿಂದಿನ ಚುನಾವಣೆಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದ ಬಲಾಢ್ಯ ಸಮುದಾಯಗಳ ನಾಯಕರ ವಿರುದ್ಧ ಕಾಂಗ್ರೆಸ್ ಶಿಸ್ತು ಕ್ರಮ ಕೈಗೊಂಡಿಲ್ಲ. ಆದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅಲ್ಪಸಂಖ್ಯಾತ ಮುಖಂಡರ ವಿರುದ್ಧ ಶಿಸ್ತುಕ್ರಮಕ್ಕೆ ಮುಂದಾಗಿದೆ. ಕಾಂಗ್ರೆಸ್ನಲ್ಲಿ ಶಿಸ್ತುಕ್ರಮ ಏನಿದ್ದರೂ ಅಲ್ಪಸಂಖ್ಯಾತರ ವಿರುದ್ಧ ಮಾತ್ರ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ಡಿಪಿಐ) ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ತಲೆದಂಡವೂ ಸೇರಿದಂತೆ ಹಲವರ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ನಲ್ಲಿ ತಯಾರಿ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಪಕ್ಷ ವಿರೋಧಿ ಚಟುವಟಿಕೆ ಕಾರಣ ಎಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ವರಿಷ್ಠರಿಗೆ ದೂರು ನೀಡಿದ್ದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಬೈರತಿ ಸುರೇಶ್ ಅವರಿಗೆ ಕೆಲ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದರು. ಆಗ ಯಾರ ವಿರುದ್ಧವೂ ಕ್ರಮ ಆಗಿರಲಿಲ್ಲ. ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಸಿದ್ದರಾಮಯ್ಯ ಅನುಯಾಯಿಗಳಾಗಿದ್ದ 17 ಶಾಸಕರು ಬಿಜೆಪಿ ಸೇರಿದಾಗಲೂ ಯಾರ ವಿರುದ್ಧವೂ ಕ್ರಮ ಆಗಿಲ್ಲ. ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಗೆಲ್ಲಬೇಕು ಎಂದು ಕಾಂಗ್ರೆಸ್ ಮುಖಂಡ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದಾಗ ಅವರಿಗೆ ನೋಟಿಸ್ ಕೂಡ ಜಾರಿಯಾಗಿಲ್ಲ. ಈ ತಾರತಮ್ಯವನ್ನು ಕಾಂಗ್ರೆಸ್ನ ಅಲ್ಪಸಂಖ್ಯಾತ ನಾಯಕರು ಪ್ರಶ್ನೆ ಮಾಡಬೇಕು’ ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ಬಿ.ಜೆಡ್ ಜಮೀರ್ ಅಹಮದ್ ಖಾನ್ ಅವರು ಈ ಉಪಚುನಾವಣೆಯಲ್ಲಿ ಎಸ್ಡಿಪಿಐ ಅಭ್ಯರ್ಥಿಗೆ ಹಣಕಾಸಿನ ನೆರವು ನೀಡಿದ್ದಾರೆ ಎಂಬ ಆರೋಪವನ್ನು ಅವರು ಅಲ್ಲಗಳೆದರು.

‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ 70ರಷ್ಟು ಮತದಾರರು ಅಹಿಂದ ವರ್ಗದವರು. ಅಲ್ಲಿ 85 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂಬ ಕೂಗೆದ್ದಿತ್ತು. ಈ ವಿಚಾರವನ್ನು ಆ ಪಕ್ಷವು ಹಗುರರಾಗಿ ತೆಗೆದುಕೊಂಡಿತ್ತು. ಆದ್ದರಿಂದ ಕಾಂಗ್ರೆಸ್ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಮತ ಚಲಾವಣೆ ಆಗಿದೆ. ಒಳಮೀಸಲಾತಿ ಹೋರಾಟಗಾರರೂ ನಮ್ಮನ್ನು ಬೆಂಬಲಿಸಿದ್ದಾರೆ. ಹಾಗಾಗಿ ಈ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್ಡಿಪಿಐ ಅಭ್ಯರ್ಥಿ ಗೆಲ್ಲಲಿದ್ದಾರೆ. ಈ ಫಲಿತಾಂಶವು ರಾಜಕೀಯ ಸ್ಥಿತ್ಯಂತರಕ್ಕೆ ಕಾರಣವಾಗಲಿದೆ. ಜಿಬಿಎ ಚುಣಾವಣೆಯಲ್ಲಿ ಹಾಗೂ 2028ರ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

‘ಕೇಂದ್ರದ 15 ನೇ ಹಣಕಾಸು ಆಯೋಗ 2025-26 ನೆ ಸಾಲಿನಲ್ಲಿ ರಾಜ್ಯಕ್ಕೆ ₹ 2,133 ಕೋಟಿ ಅನುದಾನ ಬಿಡುಗಡೆ ಮಾಡಿಲ್ಲ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸದೇ ಇರುವುದೂ ಇದಕ್ಕೆ ಕಾರಣ. ಚುನಾಯಿತ ಆಡಳಿತ ಜಾರಿಯಲ್ಲಿದ್ದ ಗ್ರಾಮ ಪಂಚಾಯಿತಿಗಳಲ್ಲಿ ಕ್ರಿಯಾಯೋಜನೆ ತಯಾರಿಸಿ ಕೈಗೊಂಡ ಕಾಮಗಾರಿಗಳಿಗೂ ಅನುದಾನ ಬಿಡುಗಡೆಯಾಗಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಜನ ಸಮಸ್ಯೆ ಎದುರಿಸುವಂತಾಗಿದೆ. ರಾಜ್ಯದಿಂದ ಆಯ್ಕೆಯಾಗಿರುವ 28 ಸಂಸದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಎಸ್ಡಿಪಿಐ ಕುರಿತು ಸಂಸತ್ತಿನಲ್ಲಿ ಮಾತನಾಡುವ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಇಂತಹ ವಿಚಾರಗಳ ಬಗ್ಗೆ ಮೌನ ವಹಿಸುತ್ತಾರೆ. ಬಾಕಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ರಿಯಾಜ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಸಾದತ್, ರಾಜ್ಯ ಸಮಿತಿ ಸದಸ್ಯ ಅಥಾವುಲ್ಲ ಜೋಕಟ್ಟೆ, ನಗರ ಜಿಲ್ಲಾ ಘಟಕದ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.