ಶನಿವಾರ, ಅಕ್ಟೋಬರ್ 23, 2021
22 °C

ಮಂಗಳೂರು: ಕಾಂಗ್ರೆಸ್‌ನಿಂದ ಪಕೋಡ ಮಾರಾಟ ಮಾಡಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಅಂಗವಾಗಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ರಸ್ತೆ ಬದಿಯಲ್ಲಿ ಪಕೋಡ ಮಾರಾಟ ಮಾಡಿ ಪ್ರತಿಭಟಿಸಲಾಯಿತು.

‘ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇಶದಲ್ಲಿ ಯುವಜನರು ಉದ್ಯೋಗ ಕಳೆದುಕೊಂಡು ದಿಕ್ಕು ತೋಚದಂತಾಗಿದ್ದಾರೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕ ಮೊಯಿಯುದ್ದೀನ್ ಬಾವಾ, ಮಹಾನಗರ ಪಾಲಿಕೆ ಸದಸ್ಯರಾದ ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಪ್ರಮುಖರಾದ ಗಣೇಶ್ ಪೂಜಾರಿ, ಶಾಹುಲ್ ಹಮೀದ್, ಸುದರ್ಶನ್ ಜೈನ್, ಪ್ರಕಾಶ್ ಸಾಲ್ಯಾನ್, ಡಾ.ಶೇಖರ್ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಶೋಭಾ ಪಡೀಲ್, ಶಕುಂತಲಾ ಶೆಟ್ಟಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು