ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಎರಡು ಹೋಳಾಗಲಿದೆ: ಕಟೀಲ್‌

ವಿಟ್ಲದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ: ಕೋಟಾ ಶ್ರೀನಿವಾಸ ಪೂಜಾರಿ ಪರ ಮತಯಾಚನೆ
Last Updated 6 ಡಿಸೆಂಬರ್ 2021, 16:29 IST
ಅಕ್ಷರ ಗಾತ್ರ

ವಿಟ್ಲ: ‘2023ರ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಎರಡು ಹೋಳಾಗಲಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.

ಕಬಕ ಇಡ್ಕಿದು ಸೊಸೈಟಿ ಸಭಾಭವನದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ಪುಣಚ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಪಂಚಾಯಿತಿ ಸದಸ್ಯರ ಧ್ವನಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು, ಪಂಚಾಯತ್ ರಾಜ್ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ದಾರೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಮಾತನಾಡಿ, ‘ಕಾರ್ಯಕರ್ತರ ಶ್ರಮದಿಂದ ನಾವು ಇಷ್ಟು ಎತ್ತರಕ್ಕೆ ಏರಲು ಸಾಧ್ಯವಾಗಿದೆ. ಅಧಿಕಾರ ನೀಡಿದ ಜನರಿಗೆ ಅಭಿವೃದ್ಧಿ ಮಾಡಿ ತೋರಿಸಬೇಕು. ಅಭ್ಯರ್ಥಿ ಎಷ್ಟೇ ಇರಬಹುದು, ಆದರೆ ನಾವು ಒಂದೇ ಮತವನ್ನು ಕೊಡಬೇಕು. ಅದು ಒಂದನೇ ಕ್ರಮಾಂಕದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರೇ ಆಗಿರಬೇಕು’ ಎಂದರು.

ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ರಾಜೇಶ್ ಕಾವೇರಿ, ಮಂಡಲ ಪ್ರಭಾರಿ ರಾಮದಾಸ್ ಬಂಟ್ವಾಳ, ವೆಂಕಟ್ ವಳಲಂಬೆ ಇದ್ದರು.

ಯಶಸ್ವಿನಿ ಶಾಸ್ತ್ರೀ ಪ್ರಾರ್ಥಿಸಿದರು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸ್ವಾಗತಿಸಿದರು. ಪುಣಚ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರು ವಂದಿಸಿದರು. ಪುಣಚ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ ನಿರೂಪಿಸಿದರು.

‘ಇತಿಹಾಸ ನಿರ್ಮಿಸಿ’

ಉಪ್ಪಿನಂಗಡಿ:‘ವಿಧಾನ ಪರಿಷತ್ ಚುನಾವಣೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಜಯಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಅವರು ಪ್ರಥಮ ಪ್ರಾಶಸ್ತ್ಯದಲ್ಲಿ ರಾಜ್ಯದಲ್ಲೇ ಗರಿಷ್ಠ ಮತ ಪಡೆಯುವ ಮೂಲಕ ಇತಿಹಾಸ ನಿರ್ಮಾಣ ಆಗಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸೋಮವಾರ ಉಪ್ಪಿನಂಗಡಿಯಲ್ಲಿ ಹಿರೇಬಂಡಾಡಿ, ಬಜತ್ತೂರು, ನೆಕ್ಕಿಲಾಡಿ, ಕೋಡಿಂಬಾಡಿ-ಬೆಳ್ಳಿಪ್ಪಾಡಿ, ಪೆರ್ನೆ-ಬಿಳಿಯೂರು ಮತ್ತು ಉಪ್ಪಿನಂಗಡಿ ಪಂಚಾಯಿತಿ ವ್ಯಾಪ್ತಿಯ ಮಹಾಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿ ಸದಸ್ಯರಿಗೆ ಖುಣ ತೀರಿಸುವ ಜವಾಬ್ದಾರಿ ಇದ್ದು, ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಬೇಕು’ ಎಂದು ಮನವಿ ಮಾಡಿದರು. ಸಚಿವ ಎಸ್. ಅಂಗಾರ ಮಾತನಾಡಿ, ‘ನಮ್ಮ ರಾಜಕೀಯ ವಿರೋಧಿ ಕಾಂಗ್ರೆಸ್‌ ವಿರುದ್ಧ ನಮ್ಮ ನಿಲುವು ಇರಬೇಕು. ನಮ್ಮ ವಿಚಾರಧಾರೆಯಲ್ಲಿ ಬದ್ಧತೆ ಇರಬೇಕು, ಈ ರೀತಿಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಹಾಕಬೇಕು’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್‌, ಶಾಸಕ ಸಂಜೀವ ಮಠಂದೂರು, ರಾಮದಾಸ ಬಂಟ್ವಾಳ, ವೆಂಕಟ ವಳಲಂಬೆ, ಉದಯಕುಮಾರ್ ಶೆಟ್ಟಿ, ರಾಜೇಶ್ ಕಾವೇರಿ, ಹರಿಕೃಷ್ಣ ಬಂಟ್ವಾಳ, ಶಯನಾ ಜಯಾನಂದ, ಬೂಡಿಯಾರ್ ರಾಧಾಕೃಷ್ಣ ರೈ, ಎನ್. ಉಮೇಶ್ ಶೆಣೈ, ಸುಜಾತ ಕೃಷ್ಣ ಆಚಾರ್ಯ, ಆನಂದ ಕುಂಟಿನಿ, ಉಷಾ ಚಂದ್ರ ಮುಳಿಯ ಇದ್ದರು.

ಬಿಜೆಪಿ ಸೇರ್ಪಡೆ: ಬಜತ್ತೂರು ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲ
ದಿಂದ ಅವಿರೋಧವಾಗಿ ಆಯ್ಕೆ
ಯಾಗಿದ್ದ ವಿಮಲ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

ಪಂಚಾಯಿತಿಗೆ ಬಲ

ಪುತ್ತೂರು: ‘ಗ್ರಾಮ ಪಂಚಾಯಿತಿಗಳಿಗೆ ಬಲ ನೀಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು.

ಪುತ್ತೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ‘ಪಂಚಾಯಿತಿಗಳ ಸಶಕ್ತಿಕರಣಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾರಣರಾಗಿದ್ದಾರೆ ಎಂಬ ಅಂಶವನ್ನು ಯಾರೂ ಮರೆಯ
ಬಾರದು. ಅವರನ್ನು ಮತ್ತೊಮ್ಮೆ ವಿಧಾನ
ಪರಿಷತ್‌ಗೆ ಆಯ್ಕೆ ಮಾಡಿ ಕಳುಹಿಸ
ಬೇಕಾದ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡಬಿದ್ರೆ ಬಂಟ್ವಾಳ ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT