ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರಿಂಜೆ: ಕಾಂಗ್ರೆಸ್ ಬೆಂಬಲಿತರಿಗೆ ಎ‌ಸ್‌ಡಿಪಿಐ ಬೆಂಬಲ

Published 16 ಆಗಸ್ಟ್ 2023, 5:20 IST
Last Updated 16 ಆಗಸ್ಟ್ 2023, 5:20 IST
ಅಕ್ಷರ ಗಾತ್ರ

ಸುರತ್ಕಲ್: ಸೂರಿಂಜೆ ಗ್ರಾಮ ಪಂಚಾಯಿತಿಯ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗೀತಾ ಶೆಟ್ಟಿ ಶಿಬರೂರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಗೋಪಾಲ ಕುಲಾಲ್ ಆಯ್ಕೆಯಾದರು.

12 ಸದಸ್ಯರಿರುವ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 6, ಕಾಂಗ್ರೆಸ್ ಬೆಂಬಲಿತ 2, ಎಸ್‌ಡಿಪಿಐ ಬೆಂಬಲಿತ ನಾಲ್ವರು ಸದಸ್ಯರಿದ್ದಾರೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಪದ್ಮಾವತಿ ಶೆಟ್ಟಿ ಕೋಟೆ ಮತ್ತು ಕಾಂಗ್ರೆಸ್‌ನಿಂದ ಗೀತಾ ಶೆಟ್ಟಿ ಶಿಬರೂರು ಸ್ಪರ್ದಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 7, ಬಿಜೆಪಿ ಬೆಂಬಲಿತ ಅಭ್ಯರ್ಥಿ 5 ಮತ ಪಡೆದರು.‌

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುಣಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತ ಅಬ್ದುಲ್ ಮಾಲಿಕ್ ಸ್ಪರ್ಧಿಸಿದ್ದರು. ಬಿಜೆಪಿ ಬೆಂಬಲಿತ ಸದಸ್ಯ ಗೋಪಾಲ ಕುಲಾಲ್ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸಮಬಲ ಸಾಧಿಸಿದಾಗ ಚೀಟಿ ಎತ್ತುವ ಮೂಲಕ ಬಿಜೆಪಿಯ ಗೋಪಾಲ ಕುಲಾಲ್ ಜಯ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT