ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರತಿಭಟನಾಕಾರರ ಬಂಧನ, ಬಿಡುಗಡೆ
Last Updated 2 ಅಕ್ಟೋಬರ್ 2020, 6:25 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಾಗೂ ಸುರತ್ಕಲ್‌ ಗುರುಪುರ, ಮಂಗಳೂರು ನಗರ ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಪುರಭವನದ ಗಾಂಧಿ ಪ್ರತಿಮೆ ಎದುರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡಿಗಡೆ ಮಾಡಲಾಯಿತು.

ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರ ನಡುವೆ ಮಾತಿನ ಚಕಮಕಿ ಕೂಡಾ ನಡೆಯಿತು.

ಇದಕ್ಕೂ ಮೊದಲು ಪ್ರತಿಭಟನಾನಿರತರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಮಸೂದೆ ಅಂಗೀಕಾರ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು. ಹಾಥರಸ್‌ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ್‌ ಗಾಂಧಿ ವಾದ್ರಾ ಅವರ ಮೇಲೆ ಉತ್ತರ ಪ್ರದೇಶದ ಪೊಲೀಸರು ಹಾಗೂ ಸರ್ಕಾರ ನಡೆಸಿದ ದೌರ್ಜನ್ಯದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆ.ಆರ್‌. ಲೋಬೊ, ಐವನ್‌ ಡಿಸೋಜ, ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹರೀಶ್‌ ಕುಮಾರ್‌, ಮಿಥುನ್‌ ರೈ, ಸುಧೀರ್‌, ಬಸೀರ್‌ ಬೈಂಕಪಾಡಿ, ನವೀನ್‌ ಡಿಸೋಜ, ಶಶಿಧರ್‌ ಹೆಗ್ಡೆ, ಪ್ರವೀಣ್‌ ಆಳ್ವ, ವಿನಯ್‌ರಾಜ್‌ , ಅಬ್ದುಲ್‌ ಸಲೀಂ, ವಿಶ್ವಾಸಕುಮಾರ್ ದಾಸ್‌ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT