ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.
'ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. 'ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ' ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.